ನವದೆಹಲಿ: ಬಹುಕೋಟಿ ಮೌಲ್ಯದ ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಉದ್ಯಮಿ ರತುಲ್ ಪುರಿಯನ್ನು ಬುಧವಾರ ಹಾಜರುಪಡಿಸುವಂತೆ ದೆಹಲಿ ನ್ಯಾಯಾಲಯ ಮಂಗಳವಾರ ತಿಹಾರ್ ಜೈಲು ಅಧಿಕಾರಿಗಳಿಗೆ ಪ್ರೊಡಕ್ಷನ್ ವಾರಂಟ್ ಜಾರಿ ಮಾಡಿದೆ.


COMMERCIAL BREAK
SCROLL TO CONTINUE READING

ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗಬೇಕೆಂದು ಕೋರಿ ಪುರಿ ಸಲ್ಲಿಸಿದ್ದ ಅರ್ಜಿಯ ಕುರಿತು ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ನಿರ್ದೇಶನ ಹೊರಡಿಸಿದ್ದಾರೆ.


ಕಳೆದ ತಿಂಗಳು ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದ ಬಳಿಕ ರತುಲ್ ಪುರಿ ಶರಣಾಗತಿ ಅರ್ಜಿಯನ್ನು ಸಲ್ಲಿಸಿದ್ದರು.


ಇದಕ್ಕೂ ಮುನ್ನ, ಪ್ರತ್ಯೇಕ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ನ್ಯಾಯಾಂಗ ಪುರಿ ಅವರನ್ನು ನ್ಯಾಯಾಲಯವು ನ್ಯಾಯಾಂಗ ಕಸ್ಟಡಿಗೆ ಕಳುಹಿಸಿದ್ದರಿಂದ ಜೈಲು ಅಧಿಕಾರಿಗಳಿಗೆ ವಾರಂಟ್ ಹೊರಡಿಸಲಾಗಿದೆ.


ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದ್ದ 3,600 ಕೋಟಿ ರೂ. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ ನಡೆದಿದ್ದು ಈ ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದೆ.