ನವದೆಹಲಿ: ಬುಧವಾರದಂದು ಗಾಂಧಿ ಕುಟುಂಬದ ಸದಸ್ಯರ ಅನುಪಸ್ಥಿತಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು ಅನೌಪಚಾರಿಕವಾಗಿ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚಿಸಲು ಭೇಟಿಯಾಗಿರುವುದು ಸಾಕಷ್ಟು ಕೂತುಹಲ ಕೆರಳಿಸಿದೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ರಾಹುಲ್ ಗಾಂಧಿಯವರ ನಿರ್ಧಾರದ ಹಿನ್ನಲೆಯಲ್ಲಿ ಈಗ ಹಿರಿಯ ನಾಯಕರು ಸಭೆ ಸೇರಿ ಪಕ್ಷದ ಕಾರ್ಯಸೂಚಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಗೆ ಈಗ ಯಾರು ಪಕ್ಷವನ್ನು ಮುನ್ನಡೆಸಬೇಕು ಎನ್ನುವದರ ಬಗ್ಗೆ ಗೊಂದಲವಿದೆ,ಈ ಹಿನ್ನಲೆಯಲ್ಲಿ ಈಗ ಹೊಸ ಸಾಧ್ಯತೆಗಳ ವಿಚಾರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪಕ್ಷದ ನಾಯಕರು ಸೇರಿ ಚರ್ಚಿಸಿದ್ದಾರೆ ಎನ್ನಲಾಗಿದೆ.


ಪಕ್ಷದ ಸಭೆಯ ನಂತರ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ನಾಯಕತ್ವದ ಕುರಿತಾಗಿ ಯಾವುದೇ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಹೇಳಿದರು. ಪಕ್ಷದ ಮೂಲಗಳ ಪ್ರಕಾರ ಸಂಸತ್ತಿನ ಅಧಿವೇಶನದಲ್ಲಿ ಸೋನಿಯಾ ಗಾಂಧಿ ಅವರು ಕಾರ್ಯತಂತ್ರವನ್ನು ರೂಪಿಸಲಿದ್ದಾರೆ ಎನ್ನಲಾಗಿದೆ.


ಒಂದೆಡೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಲು ಬದ್ದರಾಗಿದ್ದರೆ. ಉಳಿದ ನಾಯಕರು ಈ ವಿಚಾರವಾಗಿ ಮೌನ ತಾಳಿದ್ದಾರೆ . ರಾಹುಲ್ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುತ್ತಾರೆಯೇ ಅಥವಾ ಇಲ್ಲವೇ ಎನ್ನುವುದು ಇನ್ನೂ ಕೂಡ ನಿಗೂಡವಾಗಿದೆ. ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ರಾಹುಲ್ ಗಾಂಧಿ ಅವರು  ಇನ್ನು ಪಕ್ಷದ ಅಧ್ಯಕ್ಷರಾಗಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ.