`ಆಹ್ಲಾನ್ ಮೋದಿ` ಕಾರ್ಯಕ್ರಮ : ದಕ್ಷಿಣ ಭಾರತದ 4 ಭಾಷೆಗಳಲ್ಲಿ ಮಾತನಾಡಿದ ಪ್ರಧಾನಿ
Ahlan Modi` : ಇಂದು ನಡೆದ ಆಹ್ಲಾನ್ ಮೋದಿ` ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಮಾತನಾಡಿದ್ದಾರೆ.
Ahlan Modi programme : ಪ್ರಧಾನಮಂತ್ರಿ ನರೇಂದ್ರ ಮೋದಿ ಜಾಯೆದ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ಇಂದು (ಫೆ.೧೩) ನಡೆದ 'ಆಹ್ಲಾನ್ ಮೋದಿ' ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ನಾಲ್ಕು ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮತ್ತು ಮಲಯಾಳಂನಲ್ಲಿ ಮಾತನಾಡಿದ್ದಾರೆ.
ಭಾರತದ ವಿವಿಧ ರಾಜ್ಯಗಳ ಜನರು ಯುಎಇಯ ವಿವಿಧ ಪ್ರದೇಶಗಳಲ್ಲಿ ನೆಲೆಸಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಈ ಭಾಷಿಕರು ಇದ್ದಾರೆ.
ಇದನ್ನು ಓದಿ :ಈ ಸ್ಟಾರ್ ನಟನ ಆಸ್ತಿ ರೂ.1,000 ಕೋಟಿಗೂ ಹೆಚ್ಚು.. ಆದರೂ ಈತ ಬಳಸುತ್ತಿರುವುದು ಸೆಕೆಂಡ್ ಹ್ಯಾಂಡ್ ಕಾರು!
ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯುಎಇಯ ಎಲ್ಲಾ ಮೂಲೆಗಳಿಂದ ಮತ್ತು ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದಿದ್ದೀರಿ. "ಇಂದು ಅಬುಧಾಬಿಯಲ್ಲಿ, ನೀವು ಹೊಸ ಇತಿಹಾಸವನ್ನು ಸೃಷ್ಟಿಸಿದ್ದೀರಿ. ಈ ಐತಿಹಾಸಿಕ ಕ್ರೀಡಾಂಗಣದಲ್ಲಿ ಪ್ರತಿ ಹೃದಯ ಬಡಿತ, ಪ್ರತಿ ಉಸಿರು, ಪ್ರತಿ ಧ್ವನಿ ಹೇಳುತ್ತದೆ - ಭಾರತ-ಯುಎಇ ಸ್ನೇಹ ಚಿರಾಯುವಾಗಲಿ ಎಂದರು.
ಅಕ್ರಮ ಹಣ ವರ್ಗಾವಣೆ ಪ್ರಕರಣ: 2 ಬಾರಿ ED ಸಮನ್ಸ್ ಜಾರಿಯಾದರೂ ವಿಚಾರಣೆಗೆ ಹಾಜರಾಗುತ್ತಿಲ್ಲ ಫಾರೂಕ್ ಅಬ್ದುಲ್ಲಾ!
ಇಂದು ವಿಶ್ವದ ಪ್ರತಿಯೊಂದು ಪ್ರಮುಖ ವೇದಿಕೆಯಲ್ಲೂ ಭಾರತದ ಧ್ವನಿ ಕೇಳಿಬರುತ್ತಿದೆ. ಎಲ್ಲಿ ಬಿಕ್ಕಟ್ಟು ಇದೆಯೋ ಅಲ್ಲಿಗೆ ತಲುಪುವ ಮೊದಲ ದೇಶಗಳಲ್ಲಿ ಭಾರತದ ಹೆಸರು ಬರುತ್ತದೆ. ಇಂದು ಜಗತ್ತು ಭಾರತವನ್ನು ‘ವಿಶ್ವ ಬಂಧು’ ಎಂದು ನೋಡುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವುದು ಪ್ರತಿಯೊಬ್ಬ ಭಾರತೀಯನ ಗುರಿಯಾಗಿದೆ ಎಂದು ಹೇಳಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.