ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಜಾಮೀನು ಅರ್ಜಿಯನ್ನು ಅಹಮದಾಬಾದ್ ನ್ಯಾಯಾಲಯ ಶುಕ್ರವಾರ ಸ್ವೀಕರಿಸಿದೆ. ಅಲ್ಲದೆ, ಮುಂದಿನ ವಿಚಾರಣೆಯನ್ನು ಡಿ.7ಕ್ಕೆ ನಿಗದಿಪಡಿಸಿದೆ.


COMMERCIAL BREAK
SCROLL TO CONTINUE READING

ಜಬಲ್ಪುರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು "ಕೊಲೆ ಆರೋಪಿ" ಎಂದು ರಾಹುಲ್ ಗಾಂಧಿ ಹೇಳಿದ್ದರು. 


ಮತ್ತೊಂದು ಪ್ರಕರಣದಲ್ಲಿ, ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾಗಿದ್ದ ಸಂದರ್ಭದಲ್ಲಿ 2016ರಲ್ಲಿ ನೋಟು ಅಮಾನ್ಯೀಕರಣವಾದಾಗ ಸುಮಾರು 750 ಕೋಟಿ ಹಳೆ ನೊಟುಗಳನ್ನು ಬದಲಿಸಿ “ಹಗರಣ” ಮಾಡಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ರಾಹುಲ್ ಗಾಂಧಿ ಅಹಮದಾಬಾದ್ ನ್ಯಾಯಾಲಯಕ್ಕೆ ಹಾಜರಾಗಲು ಆಗಮಿಸಿದ್ದರು.