ಅಹ್ಮದಾಬಾದ್: ಅಹ್ಮದಾಬಾದ್-ಮುಂಬೈ ನಡುವಿನ 1.08ಲಕ್ಷ ಕೋಟಿ ಮೌಲ್ಯದ ಬುಲೆಟ್ ರೈಲು ಯೋಜನೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅವರಿಂದ ಶಂಕುಸ್ಥಾಪನೆ ಮಾಡುವ ಮೂಲಕ ಚಾಲನೆ ದೊರೆಯಲಿದೆ. 


COMMERCIAL BREAK
SCROLL TO CONTINUE READING

ಇದು ಭಾರತದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆಯಾಗಿದ್ದು, ಈ ಯೋಜನೆಯು 2022ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಗುಜರಾತ್ ನ ಅಹ್ಮದಾಬಾದ್ ನಿಂದ ಮುಂಬೈಗೆ ದೇಶದ ಪ್ರಪ್ರಥಮ ಬುಲೆಟ್ ರೈಲು ಸಂಚಾರ ಮಾಡಲಿದೆ.


ಬುಲೆಟ್ ರೈಲಿನ ಯೋಜನೆ ಪೂರ್ಣಗೊಂಡ ನಂತರ ಕೇವಲ 2 ಗಂಟೆಗಳಲ್ಲಿ ಅಹ್ಮದಾಬಾದ್ ನಿಂದ ಮುಂಬೈಗೆ ಸಂಚರಿಸಬಹುದೆಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.