Ahmedabad Plane Crash: ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಗುರುವಾರ (ಜೂನ್ 12) ಮಧ್ಯಾಹ್ನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿ ನಗರ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ವಿಮಾನದಲ್ಲಿ ಇಬ್ಬರು ಪೈಲಟ್‌ಗಳು, 10 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರಿದ್ದರು. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಈ ವಿಮಾನ ಅಪಘಾತ ಸಂಭವಿಸಿದೆ.
ಈ ದುರಂತದಲ್ಲಿ ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 1:38ಕ್ಕೆ ಟೇಕ್ ಆಫ್ ಆದ ಈ ವಿಮಾನದಲ್ಲಿ 169 ಭಾರತೀಯರು, 50ಕ್ಕೂ ಹೆಚ್ಚು ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಹಾಗೂ ಒಬ್ಬ ಕೆನಡಾ ಪ್ರಜೆ ಸೇರಿ ಒಟ್ಟು 242 ಜನರು ಪ್ರಯಾಣಿಸುತ್ತಿದ್ದರು. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಈ ವಿಮಾನ ನಿಯಂತ್ರಣ ತಪ್ಪಿ ಪತನಗೊಂಡಿದೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಆವರಿಸಿತ್ತು. ನಿನ್ನೆಯಿಂದ ನಡೆಯುತ್ತಿರುವ ರಕ್ಷಣಾ ಕಾರ್ಯವು ಇಂದು ಸಹ ಮುಂದುವರದಿದೆ.
VIDEO | Ahmedabad Plane Crash: PM Modi (@narendramodi) reaches crash site.
(Full video available on PTI Videos - https://t.co/n147TvrpG7) pic.twitter.com/tgUrPj7CKJ
— Press Trust of India (@PTI_News) June 13, 2025
ಇದನ್ನೂ ಓದಿ: ವಿಶ್ವದ ಶೇ. 35 ರಷ್ಟು ವಿಮಾನ ಟೇಕ್ ಆಫ್ ಸಮಯದಲ್ಲಿಯೇ ಅಪಘಾತಕ್ಕೀಡಾಗುತ್ತವೆ !ಈ ಅಪಾಯಕ್ಕೆ ಕಾರಣವೇನಿರಬಹುದು ಗೊತ್ತಾ?
Visited the crash site in Ahmedabad today. The scene of devastation is saddening. Met officials and teams working tirelessly in the aftermath. Our thoughts remain with those who lost their loved ones in this unimaginable tragedy. pic.twitter.com/R7PPGGo6Lj
— Narendra Modi (@narendramodi) June 13, 2025
ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ
#WATCH | PM Modi visits Ahmedabad Civil Hospital to meet those injured in AI-171 plane crash pic.twitter.com/ebUFXSTT8o
— ANI (@ANI) June 13, 2025
ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ (ಜೂನ್ 13) ಭೇಟಿ ನೀಡಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ, ನಂತರ ಘಟನಾ ಸ್ಥಳಕ್ಕೆ ಕಾರಿನಲ್ಲಿ ತೆರಳಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಸಾಥ್ ನೀಡಿದರು. ಇಲ್ಲದೇ ಪ್ರಧಾನಿ ಮೋದಿಯವರು ಇಂದು ಬೆಳಗ್ಗೆ ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ್ದು, ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ಲಂಡನ್‌ಗೆ ಪ್ರಯಾಣಿಸುತ್ತಿದ್ದ ವಿಜಯ್ ರೂಪಾನಿ
ಇನ್ನೂ ಈ ವಿಮಾನದಲ್ಲಿದ್ದ ಪ್ರಯಾಣಿಸುತ್ತಿದ್ದ ಬಹುತೇಕರು ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಲಂಡನ್‌ಗೆ ಪ್ರಯಾಣಿಸುತ್ತಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಸಾವನ್ನಪ್ಪಿದ್ದಾರೆ. ಬಿಜೆಪಿ ನಾಯಕ ವಿಜಯ್ ರೂಪಾನಿ ಅವರು 2016 ರಿಂದ 2021ರವರೆಗೆ ಗುಜರಾತ್‌ನ ಸಿಎಂ ಆಗಿ ಸೇವೆ ಸಲ್ಲಿಸಿದ್ದರು.
VIDEO | Ahmedabad air crash: PM Modi (@narendramodi) reaches Civil Hospital to meet the injured.#AhmedabadPlaneCrash #AirIndiaPlaneCrash
(Full video available on PTI Videos - https://t.co/n147TvrpG7) pic.twitter.com/390z8v7FAk
— Press Trust of India (@PTI_News) June 13, 2025
ಇದನ್ನೂ ಓದಿ: ಟೆಕ್ ಆಫ್ ಆಗುತ್ತಿದ್ದಂತೆಯೇ ಕ್ರಾಶ್ !ಪೈಲಟ್ ಬಳಿ ಇದ್ದದ್ದು ಕೇವಲ ಒಂದು ನಿಮಿಷ! 8 ನಿಮಿಷಗಳ ಸಂಪೂರ್ಣ ಕಥೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ