Air India Urination Case : ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನಯಾನ ನಿಯಂತ್ರಕ ಡಿಜಿಸಿಎ ಪ್ರಮುಖ ಕ್ರಮ ಕೈಗೊಂಡಿದೆ. ಏರ್ ಇಂಡಿಯಾಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ, ಏರ್ ಇಂಡಿಯಾದ ನ್ಯೂಯಾರ್ಕ್-ದೆಹಲಿ ವಿಮಾನದ ಪೈಲಟ್-ಇನ್-ಕಮಾಂಡ್ ಪರವಾನಗಿಯನ್ನು ಡಿಜಿಸಿಎ ಅಮಾನತುಗೊಳಿಸಿದೆ. ಇದಲ್ಲದೆ, ತಮ್ಮ ಕರ್ತವ್ಯವನ್ನು ನಿರ್ವಹಿಸಲು ವಿಫಲರಾದ ಏರ್ ಇಂಡಿಯಾದ ವಿಮಾನ ಸೇವೆಗಳ ನಿರ್ದೇಶಕರಿಗೆ ಡಿಜಿಸಿಎ ಮೂರು ಲಕ್ಷ ರೂಪಾಯಿ ದಂಡ ವಿಧಿಸಿದೆ.


COMMERCIAL BREAK
SCROLL TO CONTINUE READING

ಡಿಜಿಸಿಎಯ ಕ್ರಮದ ನಂತರ, ನಮ್ಮ ವರದಿ ಪ್ರಕ್ರಿಯೆಯಲ್ಲಿನ ನ್ಯೂನತೆಗಳನ್ನು ನಾವು ಒಪ್ಪಿಕೊಳ್ಳುತ್ತೇವೆ, ಅವುಗಳನ್ನು ತೆಗೆದುಹಾಕಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಏರ್ ಇಂಡಿಯಾ ಹೇಳಿದೆ. ಅನುಚಿತವಾಗಿ ವರ್ತಿಸುವ ಪ್ರಯಾಣಿಕರನ್ನು ಒಳಗೊಂಡ ಘಟನೆಗಳನ್ನು ಎದುರಿಸಲು ನೀತಿಗಳ ಬಗ್ಗೆ ಸಿಬ್ಬಂದಿ ಸದಸ್ಯರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಏರ್ ಇಂಡಿಯಾ ಹೇಳಿದೆ.


ಇದನ್ನೂ ಓದಿ : "ಬಿಜೆಪಿ ಪಕ್ಷ ಸೇರಿಕೊಳ್ಳಿ ಇಲ್ಲವೇ ಬುಲ್ಡೋಜರ್ ಎದುರಿಸಲು ಸಿದ್ದರಾಗಿ"


ನವೆಂಬರ್ 26 ರಂದು, ಪ್ರಯಾಣಿಕರೊಬ್ಬರು ಕುಡಿದು ವಿಮಾನದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ವೇಳೆ ಮಹಿಳೆ ಏರ್ ಇಂಡಿಯಾ ಸೇರಿದಂತೆ ಸಂಬಂಧಪಟ್ಟ ಸಂಸ್ಥೆಗಳಿಗೆ ದೂರು ನೀಡಿದ್ದರು. ಇದಾದ ಬಳಿಕ ದೆಹಲಿಯಲ್ಲಿ ಸಂಬಂಧಪಟ್ಟ ಪ್ರಯಾಣಿಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಆರೋಪಿಯನ್ನು ಅವರ ಕಂಪನಿ ಕೆಲಸದಿಂದ ವಜಾಗೊಳಿಸಿದೆ. ಆರೋಪಿಯೂ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದ.


ಆ ವಿಮಾನದ ಪೈಲಟ್ ಇನ್ ಕಮಾಂಡ್ ಪರವಾನಗಿಯನ್ನೂ ಅಮಾನತುಗೊಳಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ. ಇದರೊಂದಿಗೆ ನವೆಂಬರ್ 26, 2022 ರಂದು ನಡೆದ ಈ ಘಟನೆಯ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು ವಿಫಲವಾದ ಏರ್ ಇಂಡಿಯಾದ ವಿಮಾನ ಸೇವೆಗಳ ನಿರ್ದೇಶಕರಿಗೆ ಮೂರು ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ ಎಂದು ಅವರು ಹೇಳಿದರು. ನಾಲ್ಕು ಬಾರಿ ಡಿಜಿಸಿಎ ಗಮನಕ್ಕೆ ಬಂದಿದ್ದು, ಜನವರಿಯಲ್ಲಿ ಬಂದ ನಂತರ ಏರ್ ಇಂಡಿಯಾಗೆ ನೋಟಿಸ್ ನೀಡಲಾಗಿತ್ತು. ವಿವಿಧ ನಿಯಮಗಳ ಉಲ್ಲಂಘನೆಗಾಗಿ ನಿಯಂತ್ರಕರು ಈ ಕ್ರಮ ಕೈಗೊಂಡಿದ್ದಾರೆ.


ಇದನ್ನೂ ಓದಿ : ಮಗನ ನಿಶ್ಚಿತಾರ್ಥ ವೇಳೆ ಕುಟುಂಬದ ಜೊತೆ ಡಾನ್ಸ್‌ ಮಾಡಿದ ಅಂಭಾನಿ..! ವಿಡಿಯೋ ನೋಡಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.