ಮಹಾತ್ಮ ಗಾಂಧಿ ಜನ್ಮದಿನದಂದು ವಿಶೇಷ ರೀತಿಯಲ್ಲಿ Air India ನಮನ!
ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಬಸ್ 320ರ ಹಿಂಭಾಗದಲ್ಲಿ ಗಾಂಧೀಜಿಯವರ ಭಾವಚಿತ್ರವನ್ನು ಚಿತ್ರಿಸುವ ಮೂಲಕ ಏರ್ ಇಂಡಿಯಾ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದೆ.
ನವದೆಹಲಿ: ಮಹಾತ್ಮ ಗಾಂಧಿಯವರ 150ನೇ ಜನ್ಮ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದೇಶದ ಸರ್ಕಾರಿ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ವಿಭಿನ್ನ ರೀತಿಯಲ್ಲಿ ಸ್ಮರಿಸಿದೆ.
ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಬಸ್ 320ರ ಹಿಂಭಾಗದಲ್ಲಿ ಗಾಂಧೀಜಿಯವರ ಭಾವಚಿತ್ರವನ್ನು ಚಿತ್ರಿಸುವ ಮೂಲಕ ಏರ್ ಇಂಡಿಯಾ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದೆ.
ಪ್ರಧಾನಿ ಮೋದಿಯಿಂದ ಗೌರವ ಸಲ್ಲಿಕೆ
ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ರಾಜ್‌ಘಾಟ್ ತಲುಪಿ, ಗಾಂಧೀಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಜೊತೆಗೆ ದೇಶದ ಮಾಜಿ ಪ್ರಧಾನಿಯಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯೂ ಇಂದೇ ಇರುವ ಹಿನ್ನೆಲೆಯಲ್ಲಿ ಅವರಿಗೂ ನಮನ ಸಲ್ಲಿಸಿದರು.
"ಮಹಾತ್ಮ ಗಾಂಧೀಜಿವರು ದೇಶಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಮಾನವೀಯತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರ ಕನಸನ್ನು ಸಾಕಾರಗೊಳಿಸಲು ನಿರಂತರವಾಗಿ ಶ್ರಮಿಸುತ್ತೇವೆ. ಶಾಂತಿ, ಸಾಮರಸ್ಯ ಮತ್ತು ಸಹೋದರತ್ವಕ್ಕೆ ಗಾಂಧಿ ಜಿ ಅವರ ಬದ್ಧತೆ ಅಚಲವಾಗಿತ್ತು. ಅವರ ಆದರ್ಶಗಳು ನಮಗೆ ದಾರಿದೀಪ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.