ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂಗೆ ದೆಹಲಿಯ ಪಾಟಿಯಾಲಾ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


COMMERCIAL BREAK
SCROLL TO CONTINUE READING

ಏರ್​ಸೆಲ್​-ಮ್ಯಾಕ್ಸಿಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆಗಾಗಿ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ದೆಹಲಿಯ ಪಾಟಿಯಾಲಾ ಕೋರ್ಟ್ ಮೊರೆ ಹೋಗಿದ್ದ ಚಿದಂಬರಂ ಅವರಿಗೆ ಪಾಟಿಯಾಲಾ ಕೋರ್ಟ್ 
ಜುಲೈ 10ರವರೆಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಏರ್​ಸೆಲ್​-ಮ್ಯಾಕ್ಸಿಸ್​ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿವೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಲ್ಲಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿತ್ತು.