ಮಹಾರಾಷ್ಟ್ರ: ಶಾಸಕ ಸ್ಥಾನಕ್ಕೆ ರಾಜೀನಾಮೆ ಬಳಿಕ ಯಾರ ಸಂಪರ್ಕಕ್ಕೂ ಸಿಗದ ಅಜಿತ್ ಪವಾರ್

ಅಜಿತ್ ಪವಾರ್ ಅವರು ಶುಕ್ರವಾರ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರು.

Last Updated : Sep 28, 2019, 04:09 PM IST
ಮಹಾರಾಷ್ಟ್ರ: ಶಾಸಕ ಸ್ಥಾನಕ್ಕೆ ರಾಜೀನಾಮೆ ಬಳಿಕ ಯಾರ ಸಂಪರ್ಕಕ್ಕೂ ಸಿಗದ ಅಜಿತ್ ಪವಾರ್ title=
File Image

ಮುಂಬೈ: ಶರದ್ ಪವಾರ್ ಅವರ ಸೋದರಳಿಯ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಶುಕ್ರವಾರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಬಳಿಕ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ.

ಇದಕ್ಕೂ ಮೊದಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಪುಣೆಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅಜಿತ್ ಪವಾರ್ ರಾಜೀನಾಮೆ ನೀಡಲು ಕಾರಣವೇನು ಎಂಬುದು ತಿಳಿದಿಲ್ಲ ಎಂದು ಹೇಳಿದರು. ಅಜಿತ್ ರಾಜೀನಾಮೆಗೆ ಕಾರಣವೇನೆಂದು ತಿಳಿಯಲು ನಾನು ಅವರ ಮಗ ಮತ್ತು ಇತರರನ್ನು ಸಂಪರ್ಕಿಸಿದೆ ಎಂದಿದ್ದಾರೆ.

ಮೂಲಗಳ ಪ್ರಕಾರ ಅಜಿತ್ ಪವಾರ್ ತಮ್ಮ ಮಾವನ(ಶರದ್ ಪವಾರ್) ಮೇಲಿನ ಪ್ರಕರಣದಲ್ಲಿ ತಮ್ಮ ಹೆಸರೂ ಬರಬಹುದು ಎಂದು ಬಹಳ ಚಿಂತಿತರಾಗಿದ್ದರು ಎಂದು ತಮ್ಮ ಕುಟುಂಬದವರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಕಳೆದ ತಿಂಗಳು ಬಾಂಬೆ ಹೈಕೋರ್ಟ್ ನೀಡಿದ ತೀರ್ಪಿನ ನಂತರ ಎನ್‌ಸಿಪಿ ಮುಖ್ಯಸ್ಥ ಹಾಗೂ ಮುಖಂಡರ ವಿರುದ್ಧ ಇಡಿ  ಕ್ರಮ ಕೈಗೊಂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶರದ್ ಪವಾರ್, ಅಜಿತ್ ಪವಾರ್ ಸೇರಿದಂತೆ 75 ಜನರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗಕ್ಕೆ ತಿಳಿಸಲಾಗಿದೆ.

 ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಪ್ರಕರಣ ದಾಖಲಿಸಿದ್ದ ಮುಂಬೈ ಪೊಲೀಸರ ಎಫ್‌ಐಆರ್ ಆಧರಿಸಿ ಇಡಿ ಪ್ರಕರಣ ದಾಖಲಿಸಿದೆ. ಎನ್‌ಸಿಪಿ ನಾಯಕರ ನಿಯಂತ್ರಣದಲ್ಲಿರುವ ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕಿನ ತನಿಖೆಗಾಗಿ ಅರ್ಜಿದಾರ ಸುರೇಂದ್ರ ಅರೋರಾ ಬಾಂಬೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು, ಅದರ ಮೇಲೆ ನ್ಯಾಯಾಲಯ ತೀರ್ಪು ನೀಡಿತು.

Trending News