ಲಖನೌ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಬಹುಜನ ಸಮಾಜ ಪಕ್ಷ ಹಾಗೂ ಸಮಾಜವಾದಿ ಪಕ್ಷ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದ್ದು, ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಉತ್ತರಪ್ರದೇಶದ ಆಜಂಗಢ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 


COMMERCIAL BREAK
SCROLL TO CONTINUE READING

ಭಾನುವಾರ ಎಸ್‌ಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಘೋಷಣೆ ಮಾಡಲಾಗಿದೆ. ಅಖಿಲೇಶ್‌ ತಂದೆ ಮುಲಾಯಂ ಸಿಂಗ್‌ ಯಾದವ್‌ 2014ರ ಲೋಕಸಭೆ ಚುನಾವಣೆಯಲ್ಲಿಆಜಂಗಢ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇದೀಗ ತಂದೆಯ ಕ್ಷೇತ್ರದಲ್ಲಿ ಮಗ ಅಖಿಲೇಶ್‌ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ. 


ಮತ್ತೊಂದೆಡೆ ಎಸ್‌ಪಿ ಮುಖಂಡ ಆಜಂ ಖಾನ್‌ ಅವರು ರಾಮ್‌ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದಾಗಿ ತಿಳಿಸಲಾಗಿದೆ. ಉತ್ತರಪ್ರದೇಶದ 80 ಲೋಕಸಭಾ ಕ್ಷೇತ್ರಗಳಲ್ಲಿ 37 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸಮಾಜವಾದಿ ಪಕ್ಷ ಕಣಕ್ಕೆ ಇಳಿಸಲಿದ್ದು, ಇದುವರೆಗೆ 19 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ.


2014ರ ಲೋಕಸಭೆ ಚುನಾವಣೆಯಲ್ಲಿ ಉತ್ತ್ರಪರ್ದೆಶ್ದಲ್ಲಿ ಬಿಜೆಪಿ 71 ಸ್ಥಾನಗಳನ್ನು ಗಳಿಸುವ ಮೂಲಕ ದಾಖಲೆ ಬರೆದಿತ್ತು. ಆದರೆ ಎಸ್ಪಿ ಕೇವಲ 4 ಸ್ಥಾನಗಳನ್ನು ಗಳಿಸುವಲ್ಲಿ ಸಫಲವಾಗಿತ್ತು. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೊಲಗಿಸಲು ಎಸ್ಪಿ-ಬಿಎಸ್ಪಿ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿವೆ.