close

News WrapGet Handpicked Stories from our editors directly to your mailbox

ಲೋಕಸಭಾ ಚುನಾವಣಾ ಫಲಿತಾಂಶ 2019: ಪ್ರಧಾನಿ ಮೋದಿಗೆ ನಟ ಅಕ್ಷಯ್ ಅಭಿನಂದನೆ

2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಂದಿಸಿದ್ದಾರೆ.

Updated: May 24, 2019 , 12:22 PM IST
ಲೋಕಸಭಾ ಚುನಾವಣಾ ಫಲಿತಾಂಶ 2019: ಪ್ರಧಾನಿ ಮೋದಿಗೆ ನಟ ಅಕ್ಷಯ್ ಅಭಿನಂದನೆ
File Image

ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಂದಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅತಿದೊಡ್ಡ ಅಭಿಮಾನಿಯಾಗಿರುವ ಅಕ್ಷಯ್ ಕುಮಾರ್ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

"ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಐತಿಹಾಸಿಕ ವಿಜಯದ ಬಗ್ಗೆ ಹೃತ್ಪೂರ್ವಕ ಅಭಿನಂದನೆಗಳು, ರಾಷ್ಟ್ರವನ್ನು ಮುನ್ನಡೆಸಲು ಮತ್ತು ಜಾಗತಿಕ ಭೂಪಟದಲ್ಲಿ ಭಾರತದ ಛಾಪು ಮೂಡಿಸಲು ನಿಮ್ಮ ಎಲ್ಲಾ ಪ್ರಯತ್ನಗಳು ಸಫಲವಾಗಿದೆ. ನಿಮಗೆ ಮತ್ತೊಮ್ಮೆ ಶುಭಾಶಯ" ಎಂದು ಅವರು ತಮ್ಮ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಬಿಜೆಪಿ ವಿಜಯೋತ್ಸವದ ವೇಳೆ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಕೂಡಾ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾನ್ಯವಾಗಿ ಟ್ವಿಂಕಲ್ ಬಿಜೆಪಿಯ ವಿಮರ್ಶಕರಾಗಿ ಕಾಣಿಸಿಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಟ್ವಿಂಕಲ್ "ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯ ವ್ಯಾಪಕ ಗೆಲುವುಗೆ ಅಭಿನಂದನೆಗಳು" ಎಂದು ಕೂಡ ಟ್ವೀಟ್ ಮಾಡಿದ್ದಾರೆ. ಪ್ರಜಾಪ್ರಭುತ್ವದ ಹಬ್ಬವನ್ನು ಯಾವಾಗಲೂ ಆಚರಿಸಬೇಕು. "2019ರಲೋಕಸಭಾ ಚುನಾವಣಾ ಫಲಿತಾಂಶವು ಭಾರತಕ್ಕೆ ಸಾಮರಸ್ಯ ಮತ್ತು ಅಭಿವೃದ್ಧಿಯನ್ನು ತರಲಿ ಎಂದು ನಾನು ಭಾವಿಸುತ್ತೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.