ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಅಲ್ಕಾ ಲಂಬಾ
ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ಶಾಸಕಿ ಅಲ್ಕಾ ಲಂಬಾ ಭಾನುವಾರದಂದು ರಾಜೀನಾಮೆ ನೀಡಿದ್ದಾರೆ.
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ಶಾಸಕಿ ಅಲ್ಕಾ ಲಂಬಾ ಭಾನುವಾರದಂದು ರಾಜೀನಾಮೆ ನೀಡಿದ್ದಾರೆ.
ಎಎನ್‌ಐ ಜೊತೆ ಮಾತನಾಡಿದ ಚಾಂದನಿ ಚೌಕ್ ಕ್ಷೇತ್ರದ ಶಾಸಕಿ ಅಲ್ಕಾ ಲಾಂಬಾ ಅವರು ತಮ್ಮ ಕ್ಷೇತ್ರದ ಜನರೊಂದಿಗೆ ಸಮಾಲೋಚಿಸಿದ ನಂತರವೇ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಿದರು.'ನಾನು ಜನರೊಂದಿಗೆ ಮಾತನಾಡಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನಾನು ಭಾವಿಸಿದ್ದೆ.ನಾನು ಎಎಪಿಯೊಂದಿಗಿನ ಎಲ್ಲಾ ಸಂಬಂಧಗಳನ್ನುಕಳೆದುಕೊಂಡು ಅದರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕೆಂದು ನಿರ್ಧರಿಸಿದ್ದೇನೆ. ಎಎಪಿಯ ಪ್ರಾಥಮಿಕ ಸದಸ್ಯತ್ವದಿಂದ ನನ್ನ ರಾಜೀನಾಮೆಯನ್ನು ಶೀಘ್ರದಲ್ಲೇ ಲಿಖಿತವಾಗಿ ನೀಡುತ್ತೇನೆ.ಆದರೆ ನಾನು ಶಾಸಕಿಯಾಗಿ ಮುಂದುವರಿಯಲಿದ್ದೇನೆ' ಎಂದು ಅವರು ಹೇಳಿದರು.
ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಗೆ ಸಂಬಂಧಿಸಿದ ಕಾರ್ಯಗಳು ತಮ್ಮ ಕ್ಷೇತ್ರದಲ್ಲಿ ಬಾಕಿ ಉಳಿದಿದ್ದು, ಮೊಹಲ್ಲಾ ಚಿಕಿತ್ಸಾಲಯಗಳನ್ನು ನಿರ್ಮಿಸಲಾಗಿಲ್ಲ ಎಂದು ಲಾಂಬಾ ಹೇಳಿದರು. ಶಾಸಕಿಯಾಗಿ ಈ ವಿಷಯಗಳ ಬಗ್ಗೆ ಕಾರ್ಯ ನಿರ್ವಹಿಸುತ್ತೇನೆ ಎಂದು ಅವರು ತಿಳಿಸಿದರು. ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ವಿಚಾರದ ಬಗ್ಗೆ ಕೇಳಿದಾಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಕ್ಷದೊಂದಿಗಿನ ಭಿನ್ನಾಭಿಪ್ರಾಯಗಳನ್ನು ಲಂಬಾ ಪಟ್ಟಿ ಮಾಡಿದರು, "ನೀವು ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರನ್ನು ಭ್ರಷ್ಟರೆಂದು ಕರೆದಿದ್ದೀರಿ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ನೀವು ಅವರೊಂದಿಗೆ ಮೈತ್ರಿ ಕೇಳುತ್ತೀರಿ" ಎಂದು ಹೇಳಿದರು.
"ಎಎಪಿ ತನ್ನ ತತ್ವಗಳಿಂದ ವಿಮುಖವಾಯಿತು ಮತ್ತು ನಾಯಕರಾದ ಪ್ರಶಾಂತ್ ಭೂಷಣ್, ಶಾಂತಿ ಭೂಷಣ್, ಯೋಗೇಂದ್ರ ಯಾದವ್ ಮತ್ತು ಕುಮಾರ್ ವಿಶ್ವಾಸ್ ಅವರನ್ನು ಪಕ್ಷದಿಂದ ಹೊರಹಾಕಿತು. ಈಗ ಪಕ್ಷವು ಮತ ಬ್ಯಾಂಕ್ ರಾಜಕೀಯದ ಬಗ್ಗೆ ಮತ್ತು ಅಧಿಕಾರದಲ್ಲಿ ಉಳಿಯುವುದು ಹೇಗೆ ಎಂದು ಯೋಚಿಸುತ್ತದೆ" ಎಂದು ಲಂಬಾ ಹೇಳಿದರು.ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಲಂಬಾ ಪ್ರತಿಪಾದಿಸಿದರು.