ಪ್ರಧಾನಿ ಮೋದಿ ಪ್ರೈವೇಟ್ ಸೆಕ್ರೆಟರಿಯಾಗಿ ನೇಮಕಗೊಂಡಿರುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಹಿನ್ನೆಲೆ ಏನು?

Nidhi Tiwari: ಪ್ರಧಾನಿ ಮೋದಿ ಅವರ ಹೊಸ ಪ್ರೈವೇಟ್ ಸೆಕ್ರೆಟರಿಯಾಗಿ ನೇಮಕಗೊಂಡಿರುವ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿ ನಿಧಿ ತಿವಾರಿ ಮೂಲತಃ ಮೋದಿ ಲೋಕಸಭೆಯನ್ನು ಪ್ರತಿನಿಧಿಸುವ ವಾರಣಾಸಿಯ ಮಹಮೂರ್‌ಗಂಜ್ ಪ್ರದೇಶದವರು.

Written by - Yashaswini V | Last Updated : Apr 1, 2025, 09:12 AM IST
  • 2013ರಲ್ಲಿ ನಿಧಿ ತಿವಾರಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 96ನೇ ರ‍್ಯಾಂಕ್ ಗಳಿಸಿದ್ದರು.
  • ಐಎಫ್‌ಎಸ್ ಸೇವೆಗೆ ಸೇರುವ ಮುನ್ನ ವಾರಣಾಸಿಯಲ್ಲಿ ಸಹಾಯಕ ಆಯುಕ್ತರಾಗಿ ಕೆಲಸ ಮಾಡಿದ್ದರು.
  • ನೇರವಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ರಿಪೋರ್ಟ್ ಮಾಡಿಕೊಳ್ಳುತ್ತಿದ್ದರು.
ಪ್ರಧಾನಿ ಮೋದಿ ಪ್ರೈವೇಟ್ ಸೆಕ್ರೆಟರಿಯಾಗಿ ನೇಮಕಗೊಂಡಿರುವ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿ ಹಿನ್ನೆಲೆ ಏನು?

Who Is Nidhi Tewari: ಪ್ರಧಾನಿ ಕಚೇರಿಯಲ್ಲಿ (PMO) ಉಪ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ ಭಾರತೀಯ ವಿದೇಶಾಂಗ ಸೇವೆ (IFS) ಅಧಿಕಾರಿ ನಿಧಿ ತಿವಾರಿ ಅವರನ್ನು ಈಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೊಸ ಪ್ರೈವೇಟ್ ಸೆಕ್ರೆಟರಿಯಾಗಿ ನೇಮಕ ಮಾಡಲಾಗಿದೆ. ನಿಧಿ ತಿವಾರಿ ಅವರ ಹೊಸ ಪಾತ್ರ ಸ್ಯಾಲರಿ ಮ್ಯಾಟ್ರಿಕ್ಸನ 12ನೇ ಹಂತದ್ದಾಗಿದೆ.

Add Zee News as a Preferred Source

ನಿಧಿ ತಿವಾರಿ ಈಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ  ಪ್ರೈವೇಟ್ ಸೆಕ್ರೆಟರಿಯಾಗಿ ನೇಮಕಗೊಂಡಿದ್ದು ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ. ಅವರ ಹೊಸ ಕೆಲಸವೂ ಮುಂದಿನ ಆದೇಶ ಬರುವವರೆಗೆ ಜಾರಿಯಲ್ಲಿರುತ್ತದೆ. 2014ರ ಬ್ಯಾಚ್ ಐಎಫ್‌ಎಸ್ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರು ಪ್ರಧಾನಿ ಮೋದಿ ಲೋಕಸಭೆಯನ್ನು ಪ್ರತಿನಿಧಿಸುವ ವಾರಣಾಸಿಯ ಮಹಮೂರ್‌ಗಂಜ್ ಪ್ರದೇಶದವರು.

ಇದನ್ನೂ ಓದಿ- ghibli ಫೋಟೋ ಪ್ರಿಯರೇ ಎಚ್ಚರ.. ಟ್ರೆಂಡ್‌ ಫಾಲೋ ಮಾಡೋಕ್‌ ಹೋದ್ರೆ ತೊಂದ್ರೆ ಆಗೋದು ಫಿಕ್ಸ್!‌ ಈ ವಿಚಾರ ಮೊದ್ಲು ತಿಳ್ಕೋಳಿ...

2013ರಲ್ಲಿ ನಿಧಿ ತಿವಾರಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 96ನೇ ರ‍್ಯಾಂಕ್ ಗಳಿಸಿದ್ದರು. ಅಲ್ಲದೆ ಭಾರತೀಯ ವಿದೇಶಾಂಗ ಸೇವೆಗೆ ಸೇರುವ ಮುನ್ನ ವಾರಣಾಸಿಯಲ್ಲಿ ಸಹಾಯಕ ಆಯುಕ್ತರಾಗಿ ಕೆಲಸ ಮಾಡಿದ್ದರು. 2022ರಲ್ಲಿ ಅಂಡರ್ ಸೆಕ್ರೆಟರಿಯಾಗಿ ಸೇರಿದ ಅವರು 2023ರ ಜನವರಿ 6ರಿಂದ ಪ್ರಧಾನ ಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. 

ಇದನ್ನೂ ಓದಿ- ಭಾರತದಲ್ಲಿ ಈ ದಿನದಂದೇ ಸಂಭವಿಸಲಿದೆ ಮಯನ್ಮಾರ್‌ಗಿಂತ ಭೀಕರವಾದ ಭೂಕಂಪ! ಭವಿಷ್ಯ ನುಡಿದ ವಿಜ್ಞಾನಿಗಳು

ನಿಧಿ ತಿವಾರಿ ಪಿಎಂಓಗೂ ಮೊದಲು ವಿದೇಶಾಂಗ ಸಚಿವಾಲಯದ ನಿಶ್ಯಸ್ತ್ರೀಕರಣ ಹಾಗು ಅಂತಾರಾಷ್ಟ್ರೀಯ ಭದ್ರತಾ ವ್ಯವಹಾರಗಳ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಗಳಿಸಿದ್ದ ಅವರ ಪರಿಣಿತಿಯು ಪ್ರಧಾನ ಮಂತ್ರಿ ಕಚೇರಿಯಲ್ಲಿ ವಿಶೇಷವಾಗಿ ವಿದೇಶಾಂಗ ಮತ್ತು ಭದ್ರತೆ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಅವರು ನೇರವಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರಿಗೆ ರಿಪೋರ್ಟ್ ಮಾಡಿಕೊಳ್ಳುತ್ತಿದ್ದರು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News