ಕೊರೋನಾ ವಿರುದ್ಧ ಹೋರಾಟದಲ್ಲಿ ಈ ರೀತಿಯಾಗಿ ಭಾರತದ ಜೊತೆ ನಿಲ್ಲಲಿದೆ ಅಮೆರಿಕ

ಈ ವರ್ಷದ ಅಂತ್ಯದ ವೇಳೆಗೆ ಕೋವಿಡ್ -19 ಲಸಿಕೆ ಅಭಿವೃದ್ಧಿಪಡಿಸುವ ಸಾಧ್ಯತೆಯಿದೆ ಎಂದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.  

Last Updated : May 16, 2020, 11:18 AM IST
ಕೊರೋನಾ ವಿರುದ್ಧ ಹೋರಾಟದಲ್ಲಿ ಈ ರೀತಿಯಾಗಿ ಭಾರತದ ಜೊತೆ ನಿಲ್ಲಲಿದೆ ಅಮೆರಿಕ title=
File Image

ವಾಷಿಂಗ್ಟನ್: ಇಡೀ ಜಗತ್ತಿಗೆ ಕಂಟಕವಾಗಿ ಕಾಡುತ್ತಿರುವ  ಕೊರೊನಾವೈರಸ್ (Coronavirus)  ವಿರುದ್ಧದ ಹೋರಾಟದಲ್ಲಿ ಅಮೆರಿಕ ಭಾರತಕ್ಕೆ ಸಹಾಯ ಮಾಡಲು ಮುಂದಾಗಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸ್ವತಃ ಹೇಳಿಕೆ ನೀಡಿದ್ದು ಈ ಸಂಕಷ್ಟದ ಸಮಯದಲ್ಲಿ ಅಮೆರಿಕ ತನ್ನ ಮಿತ್ರ ರಾಷ್ಟ್ರ ಭಾರತಕ್ಕೆ ವೆಂಟಿಲೇಟರ್‌ಗಳನ್ನು ಒದಗಿಸಲಿದೆ. ಈ ಬಗ್ಗೆ ನನಗೆ ಹೆಮ್ಮೆ ಇದೆ. ಈ ಸಾಂಕ್ರಾಮಿಕ ಪಿಡುಗನ್ನು ನಾಶಮಾಡುವ ನಿಟ್ಟಿನಲ್ಲಿ ನಾವು ಭಾರತದೊಂದಿಗೆ ನಿಲ್ಲುತ್ತೇವೆ. ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿಯೂ ನಾವು ಸಹಕರಿಸುತ್ತಿದ್ದೇವೆ. ಒಟ್ಟಾರೆಯಾಗಿ ಈ ಕಾಣದ ಶತ್ರುವಿನ ವಿರುದ್ಧದ ಹೋರಾಟದಲ್ಲಿ ನಾವು ಒಟ್ಟಿಗೆ ಇದ್ದು ಈ ಯುದ್ಧವನ್ನು ಗೆಲ್ಲುತ್ತೇವೆ. ಈ ವರ್ಷದ ಅಂತ್ಯದ ವೇಳೆಗೆ ಕೋವಿಡ್ -19 ಲಸಿಕೆ ಅಭಿವೃದ್ಧಿಪಡಿಸುವ ಸಾಧ್ಯತೆಯಿದೆ ಎಂದು ಟ್ರಂಪ್ ಹೇಳಿದ್ದಾರೆ.  

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಉತ್ತಮ ಸ್ನೇಹಿತ ಎಂದು ಟ್ರಂಪ್ ಬಣ್ಣಿಸಿರುವ ಟ್ರಂಪ್ ನಾನು ಸ್ವಲ್ಪ ಸಮಯದ ಹಿಂದೆಯಷ್ಟೇ ಭಾರತದಿಂದ ಮರಳಿದ್ದೇನೆ ಮತ್ತು ನಾವು ಭಾರತದೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಅಮೆರಿಕಾದಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯರಿದ್ದಾರೆ.  ಅವರಲ್ಲಿ ಕೆಲ ಅತ್ಯುತ್ತಮ ವಿಜ್ಞಾನಿ ಮತ್ತು ಸಂಶೋಧಕರು ಲಸಿಕೆಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ ಕರೋನಾ ವೈರಸ್ ಲಸಿಕೆ ಈ ವರ್ಷದ ಅಂತ್ಯದ ವೇಳೆಗೆ ಅಥವಾ ಸ್ವಲ್ಪ ಸಮಯದ ನಂತರ ಮಾರುಕಟ್ಟೆಯಲ್ಲಿ ಲಭ್ಯವಾಗಬಹುದು ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ.

2020ರ ಅಂತ್ಯದ ವೇಳೆಗೆ ಲಸಿಕೆ ಸಿದ್ಧಪಡಿಸುವುದು ನಮ್ಮ ಪ್ರಯತ್ನ ಎಂದು ವೈರಸ್ ಪ್ರಕರಣಗಳನ್ನು ನಿರ್ವಹಿಸಲು ಟ್ರಂಪ್ ನೇಮಿಸಿದ ಮಾಜಿ ಔಷಧ ಕಾರ್ಯನಿರ್ವಾಹಕ ಮೊನ್ಸೆಪ್ ಸ್ಲೋಯ್ ಹೇಳಿದ್ದಾರೆ ಎನ್ನಲಾಗಿದೆ.

Trending News