ಉಲುಬೇರಿಯಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಮಾಫಿಯಾ ಸರ್ಕಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೋಮವಾರ ಟೀಕಿಸಿದ್ದಾರೆ.


COMMERCIAL BREAK
SCROLL TO CONTINUE READING

ಕಳ್ಳಸಾಗಾಣಿಕೆಯಲ್ಲಿ ಅಗ್ರ ಸ್ಥಾನದಲ್ಲಿರುವ ಪಶ್ಚಿಮ ಬಂಗಾಳ, ಕಳ್ಳಕಾಕರಿಗೆ ನೆಲೆ ನೀಡಿದೆ. ಇವೆಲ್ಲದರಿಂದ ರಾಜ್ಯ ಮುಕ್ತಿ ಪಡೆಯಬೇಕೆಂದರೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 42 ಸ್ಥಾನಗಳಲ್ಲಿ ಬಿಜೆಪಿಗೆ 23ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸುವಂತೆ ಅಮಿತ್ ಶಾ ಜನತೆಗೆ ಮನವಿ ಮಾಡಿದರು. ಅಲ್ಲದೆ, ಬಂಗಾಳದಲ್ಲಿ ಸಿಂಡಿಕೇಟ್ ರಾಜ್ 90 ದಿನಗಳೊಳಗೆ ಕೊನೆಗೊಳ್ಳಲಿದೆ ಎಂದು ಶಾ ಹೇಳಿದರು.


ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಮೊದಲು ಎನ್ಸಿಆರ್ ಜಾರಿಗೆ ತರಲಾಗುವುದು ಎಂದು ಇದೇ ಸಂದರ್ಭದಲ್ಲಿ ಅಮಿತ್ ಶಾ ಭರವಸೆ ನೀಡಿದರು.