ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್ ಜಾರಿ
Amit Shah Fake Video Case: ಬಿಜೆಪಿ ಮತ್ತು ಗೃಹ ಸಚಿವಾಲಯದ ದೂರುಗಳ ನಂತರ ಎಡಿಟ್ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಹೀಗಾಗಿ ಈ ಬಗ್ಗೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೀಸಲಾತಿ ಕುರಿತ ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿಗೆ ದೆಹಲಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಮೂಲದ ಇತರ ನಾಲ್ವರಿಗೂ ನೋಟಿಸ್ ನೀಡಲಾಗಿದೆ.
ಅಮಿತ್ ಶಾ ಅವರು ಸಂವಿಧಾನ ಬದಲಾವಣೆ ಮತ್ತು ಮೀಸಲಾತಿ ರದ್ದು ಮಾಡುವ ವಿಚಾರವಾಗಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವನ್ನು ತೆಲಂಗಾಣ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿತ್ತು ಎಂದು ಆರೋಪಿಸಲಾಗಿದೆ. ಬಳಿಕ ಈ ವಿಡಿಯೋವನ್ನು ಅನೇಕ ಕಾಂಗ್ರೆಸ್ ನಾಯಕರು ಶೇರ್ ಮಾಡಿಕೊಂಡಿದ್ದರು.
ಇದನ್ನೂ ಓದಿ: ಕೇರಳ : ಬಿಸಿಲಿನ ತಾಪಕ್ಕೆ 90 ವರ್ಷದ ಮಹಿಳೆ ಸಾವು, ಮೂರು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆ
ಬಿಜೆಪಿ ಮತ್ತು ಗೃಹ ಸಚಿವಾಲಯದ ದೂರುಗಳ ನಂತರ ಎಡಿಟ್ ಮಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಹೀಗಾಗಿ ಈ ಬಗ್ಗೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ತಿರುಚಿರುವ ವಿಡಿಯೋದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಪರಿಶಿಷ್ಟ ಜಾತಿ(SC), ಪರಿಶಿಷ್ಟ ಪಂಗಡ(ST) ಮತ್ತು ಇತರ ಹಿಂದುಳಿದ ವರ್ಗಗಳ(OBC) ಮೀಸಲಾತಿ ಕೋಟಾಗಳನ್ನು ರದ್ದುಗೊಳಿಸಬೇಕು ಎಂದು ಹೇಳಿರುವುದು ಕಂಡುಬಂದಿತ್ತು. ಇದು ಹೊಸ ವಿವಾದವನ್ನು ಸೃಷ್ಟಿಸಿತ್ತು. ಹೀಗಾಗಿ ಬಿಜೆಪಿ ತೆಲಂಗಾಣ ಸಿಎಂ ವಿರುದ್ಧ ದೂರು ನೀಡಿತ್ತು. ಹೀಗಾಗಿ ಈ ಪ್ರಕರಣದಲ್ಲಿ ಇದೀಗ ರೇವಂತ್ ರೆಡ್ಡಿಗೆ ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ: ಹೈದರಾಬಾದ್ ವಿಮಾನ ನಿಲ್ದಾಣದ ಬಳಿ ಚಿರತೆ, ಸೆರೆ ಹಿಡಿಯಲು ಬಲೆ, ಸಿಸಿಟಿವಿ ಸಜ್ಜು
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.