ಬಿಜೆಪಿ ಸೇರ್ತಾರಾ ಸೌರವ್ ಗಂಗೂಲಿ...? ಗಂಗೂಲಿ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿರುವ ಅಮಿತ್ ಶಾ..!
ಪಶ್ಚಿಮ ಬಂಗಾಳಕ್ಕೆ ಮೂರು ದಿನಗಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋಲ್ಕತ್ತಾದಲ್ಲಿರುವ ಬಿಸಿಸಿಐ ಅಧ್ಯಕ್ಷ ಮತ್ತು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ನಿವಾಸದಲ್ಲಿನ ಔತಣಕೂಟದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕೊಲ್ಕತ್ತಾ: ಪಶ್ಚಿಮ ಬಂಗಾಳಕ್ಕೆ ಮೂರು ದಿನಗಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋಲ್ಕತ್ತಾದಲ್ಲಿರುವ ಬಿಸಿಸಿಐ ಅಧ್ಯಕ್ಷ ಮತ್ತು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ನಿವಾಸದಲ್ಲಿನ ಔತಣಕೂಟದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಸುದ್ದಿ ಮೂಲಗಳ ಪ್ರಕಾರ ಗೃಹ ಸಚಿವ ಅಮಿತ್ ಶಾ ಅವರು ಸೌರವ್ ಗಂಗೂಲಿ ಆಹ್ವಾನವನ್ನು ಸ್ವೀಕರಿಸಿದ್ದು, ತಮ್ಮ ಉಪಸ್ಥಿತಿಯನ್ನು ಷಾ ಖಚಿತಪಡಿಸಿದ್ದಾರೆ.ಈಗ ಸೌರವ್ ಗಂಗೂಲಿ ಅವರು ತಮ್ಮ ನಿವಾಸದಲ್ಲಿ ಅಮಿತ್ ಷಾ ಅವರಿಗೆ ಸಸ್ಯಾಹಾರಿ ಭೋಜನವನ್ನು ಸಿದ್ದಪಡಿಸಿದ್ದಾರೆ ಎನ್ನಲಾಗಿದೆ.ಶುಕ್ರವಾರ ಸಂಜೆ ಗಂಗೂಲಿ ಅವರೊಂದಿಗೆ ಔತಣಕೂಟದ ನಂತರ ಶಾ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.
'ಅಕ್ರಮ ಹಣದಿಂದಲೇ ಬಿಜೆಪಿ ಇಂದು ದೇಶದಲ್ಲಿ ಶ್ರೀಮಂತ ಪಕ್ಷವಾಗಿದೆ'
ಅದಕ್ಕೂ ಮುನ್ನ ವಿಕ್ಟೋರಿಯಾ ಸ್ಮಾರಕದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾ ಪಾಲ್ಗೊಳ್ಳಲಿದ್ದಾರೆ.ಅಲ್ಲಿಂದ ಗೃಹ ಸಚಿವರು ಬೆಹಲಾದಲ್ಲಿರುವ ಗಂಗೂಲಿ ಅವರ ನಿವಾಸಕ್ಕೆ ಭೋಜನಕ್ಕೆ ತೆರಳುವ ನಿರೀಕ್ಷೆಯಿದೆ.ಷಾ ಅವರೊಂದಿಗೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸ್ವಪನ್ ದಾಸ್‌ಗುಪ್ತಾ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆಗಮಿಸುವ ಸಾಧ್ಯತೆಯಿದೆ.
ಗಂಗೂಲಿಯವರ ಪತ್ನಿ, ಖ್ಯಾತ ಒಡಿಸ್ಸಿ ನೃತ್ಯಗಾರ್ತಿ ಡೋನಾ ಗಂಗೂಲಿ ಅವರು ಶುಕ್ರವಾರ ವಿಕ್ಟೋರಿಯಾ ಸ್ಮಾರಕದಲ್ಲಿ ಪ್ರದರ್ಶನ ನೀಡಲಿದ್ದಾರೆ ಕುತೂಹಲಕಾರಿ ಸಂಗತಿಯೆಂದರೆ, 2021ರ ವಿಧಾನಸಭೆ ಚುನಾವಣೆಗೂ ಮುನ್ನ ಗಂಗೂಲಿ ಬಿಜೆಪಿ ಸೇರಬಹುದು ಎಂಬ ವದಂತಿ ಹಬ್ಬಿತ್ತು.ಈಗ ಅಮಿತ್ ಷಾ ಅವರು ಗಂಗೂಲಿ ಮನೆಗೆ ಸೌಜನ್ಯದ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ
ಇನ್ನೊಂದೆಡೆಗೆ ಅಮಿತ್ ಶಾ ಅವರು ಪಕ್ಷದ ನಾಯಕರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಮೂರು ದಿನಗಳ ಬಂಗಾಳ ಪ್ರವಾಸದಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.