ಕೇಂದ್ರ ಸಚಿವ ಅಮಿತ್‌ ಶಾ-ಸಿಎಂ ಬೊಮ್ಮಾಯಿ ಭೇಟಿ: ಸಂಪುಟ ಕುರಿತು ಮಹತ್ವದ ಚರ್ಚೆ

ನವದೆಹಲಿಯಲ್ಲಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ಊಭಯ ನಾಯಕರು, ರಾಜ್ಯದ ಸದ್ಯದ ಪರಿಸ್ಥಿತಿ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಭಾರೀ ಕುತೂಹಲ ಮೂಡಿಸಿರುವ ಸಚಿವ ಸಂಪುಟದ ಕುರಿತು ಚರ್ಚಿಸಿದ್ದಾರೆ. 

Written by - Bhavishya Shetty | Last Updated : May 11, 2022, 04:09 PM IST
  • ದೆಹಲಿಯಲ್ಲಿ ಅಮಿತ್‌ ಶಾ ಭೇಟಿಯಾದ ಸಿಎಂ ಬೊಮ್ಮಾಯಿ
  • 45 ನಿಮಿಷ ಮಾತುಕತೆ ನಡೆಸಿದ ಉಭಯ ನಾಯಕರು
  • ಸಚಿವ ಸಂಪುಟದ ಬಗ್ಗೆ ನಾಯಕರ ಚರ್ಚೆ
ಕೇಂದ್ರ ಸಚಿವ ಅಮಿತ್‌ ಶಾ-ಸಿಎಂ ಬೊಮ್ಮಾಯಿ ಭೇಟಿ: ಸಂಪುಟ ಕುರಿತು ಮಹತ್ವದ ಚರ್ಚೆ  title=
Amith Shah-CM Bommai

ನವದೆಹಲಿ: ಕರ್ನಾಟಕದಲ್ಲಿ ಸಂಪುಟ ಪುನರ್‌ ರಚನೆಯಾಗುತ್ತದೆಯೋ ಅಥವಾ ವಿಸ್ತರಣೆಯಾಗುತ್ತದೆಯೋ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿಯಾಗಿದ್ದು, ಈ ಸಂಬಂಧ ಮಾತುಕತೆ ನಡೆಸಿದ್ದಾರೆ. 

ಇದನ್ನು ಓದಿ: "ಧ್ವನಿವರ್ಧಕ ಬಳಕೆ ನಿಷೇಧ": ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿಯಲ್ಲಿ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ ಉಭಯ ನಾಯಕರು, ರಾಜ್ಯದ ಸದ್ಯದ ಪರಿಸ್ಥಿತಿ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಭಾರೀ ಕುತೂಹಲ ಮೂಡಿಸಿರುವ ಸಚಿವ ಸಂಪುಟದ ಕುರಿತು ಚರ್ಚಿಸಿದ್ದಾರೆ. 

ರಾಜಕೀಯ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಬಗ್ಗೆ ಕೇಂದ್ರ ಸಚಿವರು ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಇನ್ನು ಸಂಪುಟದ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಜೊತೆ ಚರ್ಚಿಸಿ ಎರಡು ದಿನಗಳೊಳಗಾಗಿ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ ಎನ್ನಲಾಗಿದೆ. ಇನ್ನುಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಷಿ ಉಪಸ್ಥಿತರಿದ್ದರು.

ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿ ಪಾಳಯದಲ್ಲಿ ಈಗಾಗಲೇ ಚರ್ಚೆ ನಡೆಯುತ್ತಿದೆ. ಮೇ 11ರೊಳಗೆ ಈ ಗೊಂದಲಗಳಿಗೆ ಅಂತ್ಯ ಬೀಳುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮತ್ತೆ ಮುಂದೂಡಿಕೆಯಾಗಿದೆ.

ಇದನ್ನು ಓದಿ: ವಿವಿಧ ಬೇಡಿಕೆಯಿಟ್ಟು ಏಳು ದಿನಗಳಿಂದ ಉಪವಾಸ ಮಾಡಿ ಆಸ್ಪತ್ರೆ ಸೇರಿದ ಉಗ್ರ

ಕಳೆದ ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಾಜ್ಯ ರಾಜಕೀಯದ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News