ಮಥುರಾ: ಶನಿವಾರ ಬೆಳಿಗ್ಗೆ ಮಥುರಾದ ಕೈಗಾರಿಕಾ ಪ್ರದೇಶದಲ್ಲಿರುವ ಐಸ್ ಕ್ರೀಮ್ ಕಾರ್ಖಾನೆಯಲ್ಲಿ ಅಮೋನಿಯ ಅನಿಲ ಸೋರಿಕೆಯಾಗಿದ್ದು ಹಲವರ ಸ್ಥಿತಿ ಗಂಭೀರವಾಗಿದೆ.


COMMERCIAL BREAK
SCROLL TO CONTINUE READING

ಕಾರ್ಖಾನೆಯ ಅನಿಲ ಸೋರಿಕೆ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಖಾನೆಯಲ್ಲಿ ಸಿಲುಕಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಸ್ಥಳೀಯರನ್ನು ಬೇರೆಡೆ ಸ್ಥಳಾಂತರಿಸಿದ ಪೊಲೀಸರು:
ಅಮೋನಿಯ ಅನಿಲದ ಸೋರಿಕೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಇಡೀ ಪ್ರದೇಶದಲ್ಲಿದ್ದ ಜನರನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಪರಿಸ್ಥಿತಿಯನ್ನು ತಹಬದಿಗೆ ತರಲು ಹರಸಾಹಸ ಪಡುತ್ತಿದ್ದಾರೆ.


ಅಮೋನಿಯಾ ಅನಿಲದ ಸೋರಿಕೆಯ ಪರಿಣಾಮವಾಗಿ ಗ್ರಾಮದ ಜನರಲ್ಲಿ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದ್ದು, ಇದರಿಂದ ಗ್ರಾಮಸ್ಥರಲ್ಲಿ ಗಾಬರಿ ಮನೆಮಾಡಿದೆ.