ಮುಂಬೈ: ಮುಂಬೈಯ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದ 53 ವರ್ಷದ ಗಗನಸಖಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಏವಿಯೇಷನ್ ​​ಕಂಪೆನಿಯ ಮೂಲಗಳ ಪ್ರಕಾರ, ಏರ್ ಇಂಡಿಯಾದ ಎಐ -864 ಮುಂಬೈ- ದೆಹಲಿ ನಡುವೆ ಹಾರಾಡಲು ಅಣಿಯಾಗಿದ್ದ ಏರ್ ಇಂಡಿಯಾ ಫ್ಲೈಟ್ ಎಐ864 ವಿಮಾನದಲ್ಲಿ ಈ ಅಪಘಾತ ಸಂಭವಿಸಿದೆ. 


ವಿಮಾನ ಪುಷ್ ಬ್ಯಾಕ್ ಬಾಗಿಲು ಮುಚ್ಚುವ ಸಂದರ್ಭದ್ಸಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಗಗನಸಖಿಯನ್ನು ನಾನಾವತಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. 


ತಮಿಳುನಾಡು: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸುರಕ್ಷಿತ
ಅಕ್ಟೋಬರ್ 12 ರಂದು ತಮಿಳುನಾಡಿನ ತಿರುಚಿರಾಪಲ್ಲಿಯಿಂದ ಭಾರತೀಯ ಏರ್ ಇಂಡಿಯಾ ವಿಮಾನ ದುಬೈಗೆ ಪ್ರಯಾಣಿಸುತ್ತಿದ್ದಾಗ ವಿಮಾನ ನಿಲ್ದಾಣದ ಗೋಡೆಗೆ ಕುಸಿದಿದೆ. ವಿಮಾನದಲ್ಲಿ 130 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.