ನವದೆಹಲಿ: ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಬಂಧನವನ್ನು ವಿಶ್ವಸಂಸ್ಥೆಯ ಅಧಿಕಾರಿಗಳು ಖಂಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಹೇಳಿಕೆ ನೀಡಿರುವ ಅವರು ಮಾನವ ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ, ತೀಸ್ತಾ ದ್ವೇಷ ಮತ್ತು ತಾರತಮ್ಯದ ವಿರುದ್ಧ ಬಲವಾದ ಧ್ವನಿ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಕ್ಷಕರ ವಿಶೇಷ ವರದಿಗಾರ್ತಿ ಮೇರಿ ಲಾಲರ್ ಹೇಳಿದ್ದಾರೆ.


ಶನಿವಾರ ಸಂಜೆ ಮುಂಬೈನಿಂದ ಗುಜರಾತ್ ಪೊಲೀಸರ ಭಯೋತ್ಪಾದನಾ ನಿಗ್ರಹ ದಳದಿಂದ ತೀಸ್ತಾ ಅವರನ್ನು ಬಂಧಿಸಿದ ಬೆನ್ನಲ್ಲೇ ಈಗ ವಿಶ್ವಸಂಸ್ಥೆ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: Vikrant Rona: ಎಷ್ಟಾಗಲಿದೆ ʻವಿಕ್ರಾಂತ್ ರೋಣʼ ಕಲೆಕ್ಷನ್? ಕಿಚ್ಚನ ಲೆಕ್ಕಾಚಾರವೇನು!


ಇತ್ತೀಚಿಗೆ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀಸ್ತಾ ಸೇತಲ್ವಾಡ ಅವರು 2002 ರ ಗುಜರಾತ್ ದಂಗೆಗಳ ಬಗ್ಗೆ ಆಧಾರರಹಿತ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದರು.


ಎಎನ್ಐ ಗೆ ನೀಡಿರುವ ಸಂದರ್ಶನದಲ್ಲಿ ಅಮಿತ್ ಶಾ ಅವರು ಮಾತನಾಡುತ್ತಾ 'ನಾನು ತೀರ್ಪನ್ನು ಬಹಳ ಎಚ್ಚರಿಕೆಯಿಂದ ಓದಿದ್ದೇನೆ.ತೀರ್ಪಿನಲ್ಲಿ ತೀಸ್ತಾ ಸೆಟಲ್ವಾಡ್ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅವರು ನಡೆಸುತ್ತಿರುವ ಎನ್‌ಜಿಒ ಗಲಭೆಯ ಬಗ್ಗೆ ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದೆ' ಎಂದು ಅವರು ಹೇಳಿದ್ದರು.


ಇದನ್ನೂ ಓದಿ : ಕನ್ನಡಕ್ಕೆ ಎಂಟ್ರಿಕೊಟ್ಟ 'ವಿಶ್ವ ಸುಂದರಿ'..! ಯುವರಾಜ್‌ಗೆ ನಾಯಕಿ ಆಗ್ತಾರಾ ಮಾನುಷಿ ಚಿಲ್ಲರ್..?


ಇದಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಪ್ರಧಾನಿ ಮೋದಿ, ಮತ್ತು ಇತರರಿಗೆ ಎಸ್‌ಐಟಿ ಅನುಮತಿಯನ್ನು ಪ್ರಶ್ನಿಸಿ ಝಾಕಿಯಾ ಜಾಫ್ರಿ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.


ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ನ್ಯಾಯಾಲಯದ ತ್ರಿಸದಸ್ಯ ಪೀಠವು ಪ್ರಕರಣದ ಸಹ-ಅರ್ಜಿದಾರರಾದ ಎಂಎಸ್ ಸೆಟಲ್ವಾಡ್ ಅವರು ಝಕಿಯಾ ಜಾಫ್ರಿ ಅವರ ಭಾವನೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.