)
ಆಂಧ್ರಪ್ರದೇಶ : ಇಂದು ಮುಂಜಾನೆ 5 ಗಂಟೆಗೆ ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿಯ ದರ್ಶನ ಮುಗಿಸಿಕೊಂಡು ಊರಿನ ಕಡೆಗೆ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕರ್ನಾಟಕದ 5 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ. ಇನ್ನೊಂದು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದೆ ಎಂದು ವರದಿಯಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ವಿಫ್ಟ್ ಡಿಜೈರ್ನಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಫಾರ್ಚೂನರ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಲ್ಲಿ ಮೂವರು ವಯಸ್ಕರು ಮತ್ತು ಇಬ್ಬರು ಮಕ್ಕಳು ಎಂದು ಹೇಳಲಾಗಿದೆ. ಪೊಲೀಸ್ ಮೂಲಗಳು ತಿಳಿಸಿರುವ ಪ್ರಕಾರ ಅಪಘಾತ ಸಂಭವಿಸಿದಾಗ ಮೃತರು ಕರ್ನಾಟಕದವರಾಗಿದ್ದು, ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಇದೀಗ ಈ ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದ್ದು, ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಹಿಂದೆಯೂ ಇಂತಹ ಅಪಘಾತಗಳು ಸಂಭವಿಸಿದೆ ಎಂದು ವರದಿಯಾಗಿದೆ. ಸದ್ಯ ಮೃತಪಟ್ಟ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.