ಉಪವಾಸ ನಿರತ ಅಣ್ಣಾ ಹಜಾರೆ ಆರೋಗ್ಯದಲ್ಲಿ ವ್ಯತ್ಯಯ
ಉಪವಾಸ ಸತ್ಯಾಗ್ರಹ ಆರಂಭಿಸಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣದಲ್ಲಿ ಏರಿಕೆಯಾಗಿದೆ.
ಅಹ್ಮದ್‌ನಗರ: ಲೋಕಪಾಲ್ ನೇಮಕಾತಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆರೋಗ್ಯದಲ್ಲಿ ವ್ಯತ್ಯಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಬುಧವಾರದಿಂದ ಅಹ್ಮದ್‌ನಗರ ಜಿಲ್ಲೆಯ ರಾಲೇಗಾವ್ ಸಿದ್ದಿಯಲ್ಲಿ ಲೋಕಾಯುಕ್ತ ಮತ್ತು ಲೋಕಪಾಲ್ ನೇಮಕಾತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣದಲ್ಲಿ ಏರಿಕೆಯಾಗಿದೆ.
ಕಳೆದ ಮೂರು ದಿನಗಳಿಂದ ಅಣ್ಣಾ ಹಜಾರೆ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹಕ್ಕೆ ಸ್ಥಳೀಯರೂ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಕರ್ತರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು, ಅಣ್ಣಾ ಹಜಾರೆ ಆರೋಗ್ಯ ವ್ಯತ್ಯವಾಗಿದ್ದರೂ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದರು.