Anna Hazare: ರೈತರ ಪರವಾಗಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಅಣ್ಣಾ ಹಜಾರೆ..!

ಮಹಾರಾಷ್ಟ್ರದ ಅಹ್ಮದ್‌ನಗರದ ರಾಲೇಗನ್ ಸಿದ್ಧಿಯಲ್ಲಿ ಜನವರಿ.30ರಿಂದ ಉಪವಾಸ ಸತ್ಯಾಗ್ರಹ

Last Updated : Jan 28, 2021, 11:39 PM IST
  • ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡುವೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಉಪವಾಸ ಸತ್ಯಾಗ್ರಹ
  • ಮಹಾರಾಷ್ಟ್ರದ ಅಹ್ಮದ್‌ನಗರದ ರಾಲೇಗನ್ ಸಿದ್ಧಿಯಲ್ಲಿ ಜನವರಿ.30ರಿಂದ ಉಪವಾಸ ಸತ್ಯಾಗ್ರಹ
  • ದೇಶದ ರೈತರ ಆಕ್ರೋಶಕ್ಕೆ ಕಾರಣವಾಗಿರುವ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಉಗ್ರ ಹೋರಾಟ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರವು ಈ ಬಗ್ಗೆ ಗಮನ ಹರಿಸಬೇಕು. ರೈತರರೊಂದಿಗೆ ಸಂಧಾನ ಸಭೆ ನಡೆಸಬೇಕು.
 Anna Hazare: ರೈತರ ಪರವಾಗಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಅಣ್ಣಾ ಹಜಾರೆ..! title=

ನವದೆಹಲಿ: ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡುವೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದಾರೆ.

ಮಹಾರಾಷ್ಟ್ರದ ಅಹ್ಮದ್‌ನಗರದ ರಾಲೇಗನ್ ಸಿದ್ಧಿಯಲ್ಲಿ ಜನವರಿ.30ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಅಣ್ಣಾ ಹಜಾರೆ(Anna Hazare) ಹೇಳಿದ್ದಾರೆ. ಅಲ್ಲದೇ ತಮ್ಮ ಬೆಂಬಲಿಗರು ತಾವಿರುವ ಸ್ಥಳಗಳಲ್ಲೇ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ.

CBSE 10 ,12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೆ ಮೂಹರ್ತ ಫಿಕ್ಸ್!

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಗಣರಾಜ್ಯೋತ್ಸವದಲ್ಲಿ ಪ್ರದರ್ಶಿಸಿದ ಅಯೋಧ್ಯೆ ರಾಮ ಮಂದಿರ್ ಸ್ಥಬ್ದ ಚಿತ್ರಕ್ಕೆ ಪ್ರಥಮ ಸ್ಥಾನ

ಮೊದಲೇ ಎಚ್ಚರಿಕೆ ನೀಡಿದ್ದ ಅಣ್ಣಾ ಹಜಾರೆ: ದೇಶದ ರೈತರ ಆಕ್ರೋಶಕ್ಕೆ ಕಾರಣವಾಗಿರುವ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಉಗ್ರ ಹೋರಾಟ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರವು ಈ ಬಗ್ಗೆ ಗಮನ ಹರಿಸಬೇಕು. ರೈತರರೊಂದಿಗೆ ಸಂಧಾನ ಸಭೆ ನಡೆಸಬೇಕು. ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು. ಜನವರಿಯೊಳಗೆ ರೈತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಈ ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ ವಲಯದ ಉದ್ಯೋಗಳಲ್ಲಿ ಸ್ಥಳೀಯರಿಗೆ ಶೇ 75 ರಷ್ಟು ಮೀಸಲಾತಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News