Annamalai on Rahul Gandhi : 'ಮೋದಿ ಉಪನಾಮ' ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆ ಅವರು ಸಂಸದ ಸ್ಥಾನ ಕಳೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದ್ದು, ಮುಂದಿನ ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿ ಅವರಿಗೆ 30 ದಿನಗಳ ಕಾಲಾವಕಾಶ ನೀಡಲಾಗಿದೆ. 


COMMERCIAL BREAK
SCROLL TO CONTINUE READING

ಇನ್ನು ರಾಜ್ಯಾದ್ಯಂತ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ, ನ್ಯಾಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಹಲವು ರಾಜಕೀಯ ನಾಯಕರು ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ಮತ್ತು ಸಂಸದ ಸ್ಥಾನದದಿಂದ ಅನರ್ಹಗೊಳಿಸಿರುವ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ತಮಿಳುನಾಡಿನ ಟುಟಿಕೋರಿನ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರಿಗೆ ಸಂದರ್ಶನ ನೀಡಿದ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಈ ಬಗ್ಗೆಯೂ ಮಾತನಾಡಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ


ಕಾನೂನು ಎಲ್ಲರಿಗೂ ಅನ್ವಯಿಸುತ್ತದೆ. ಕಾನೂನಿನ ಆಧಾರದ ಮೇಲೆ ಸ್ಪೀಕರ್ ರಾಹುಲ್‌ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ರಾಹುಲ್ ಗಾಂಧಿ ಪ್ರಕರಣದಲ್ಲಿ ಪ್ರತಿತಂತ್ರಗಳನ್ನು ತೆಗೆದುಕೊಳ್ಳಬಾರದು ಎಂದು ನ್ಯಾಯಾಲಯ ಹೇಳಿಲ್ಲ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆಯೂ ಸಹ ನ್ಯಾಯಾಲಯವು ಇಂತಹ ತೀರ್ಪುಗಳನ್ನು ನೀಡಿದ ನಂತರ ಸಂಸದರನ್ನು ಈಗಾಗಲೇ ಅನರ್ಹಗೊಳಿಸಲಾಗಿದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನೂ ಅನರ್ಹಗೊಳಿಸಲಾಗಿದೆ ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಹೇಳಿದ್ದಾರೆ.


ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಕಾರಣಕ್ಕೆ ಅಂತಹ ಕ್ರಮಗಳನ್ನು ಕೈಗೊಂಡಿಲ್ಲ. ರಾಹುಲ್ ಗಾಂಧಿ ಬಿಜೆಪಿಯ ಬ್ರಾಂಡ್ ಅಂಬಾಸಿಡರ್ ಇದ್ದಂತೆ, ಅವರು ಚುನಾವಣೆಗೆ ಸ್ಪರ್ಧಿಸಿದರೆ ಮಾತ್ರ ಬಿಜೆಪಿ ಗೆಲ್ಲುತ್ತದೆ. ರಾಹುಲ್ ಗಾಂಧಿ ಸ್ಪರ್ಧಿಸಬೇಕು ಎಂದು ಬಿಜೆಪಿ ಬಯಸುತ್ತದೆ ಎಂದು ಅಣ್ಣಾಮಲೈ ತಿಳಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.