Earthquake In Uttarakhand: ಉತ್ತರಾಖಂಡದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪ ಸಂಭವಿಸಿದೆ. ಉತ್ತರಾಖಂಡದ ಪಿಥೋರಗಢದಲ್ಲಿ ಇಂದು ಬೆಳಗ್ಗೆ ಭೂಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.  


COMMERCIAL BREAK
SCROLL TO CONTINUE READING

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದಿಂದ (ಎನ್‌ಸಿಎಸ್) ಪಡೆದ ಮಾಹಿತಿಯ ಪ್ರಕಾರ, ಉತ್ತರಾಖಂಡದ ಪಿಥೋರಗಢದಲ್ಲಿ ಇಂದು ಬೆಳಗ್ಗೆ ಭೂಕಂಪನದ ಅನುಭವವಾಗಿದೆ.  ಉತ್ತರಾಖಂಡ್‌ನ ಪಿಥೋರಗಢ್‌ನಿಂದ ಈಶಾನ್ಯಕ್ಕೆ 48 ಕಿಮೀ ದೂರದಲ್ಲಿ 4 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರಿಲ್ಲಿ ಯಾವುದೇ ರೀತಿಯ ಜೀವ ಹಾನಿ, ಆಸ್ತಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. 


Rajastan Assembly Elections: 63 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್, ಮದ್ಯ, ಚಿನ್ನ, ನಗದು ವಶ


ಗಮನಾರ್ಹವಾಗಿ, ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ  ಅಕ್ಟೋಬರ್ 5 ರಂದು, ಮುಂಜಾನೆ 3:49ರ ಸುಮಾರಿಗೆ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 3.2 ರಷ್ಟಿಟ್ಟು ಎಂದು ವರದಿಯಾಗಿತ್ತು.  


ಇದನ್ನೂ ಓದಿ- "ಬಿಜೆಪಿ ಪಾಕಿಸ್ತಾನಿ ಕ್ರಿಕೆಟಿಗರ ಮೇಲೆ ಹೂವಿನ ಮಳೆಗರೆಯುವುದಾದರೆ..."


ಒಂದು ದಿನದ ಹಿಂದೆ, ಭಾನುವಾರ (ಅಕ್ಟೋಬರ್ 15) ಸಂಜೆ 4:08 ರ ಸುಮಾರಿಗೆ ಹರಿಯಾಣದ ಫರಿದಾಬಾದ್‌ನಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.   ಭೂಕಂಪದ ಕೇಂದ್ರಬಿಂದು ಫರಿದಾಬಾದ್‌ನಿಂದ ಒಂಬತ್ತು ಕಿಲೋಮೀಟರ್ ಪೂರ್ವಕ್ಕೆ ಮತ್ತು ದೆಹಲಿಯಿಂದ 30 ಕಿಲೋಮೀಟರ್ ಆಗ್ನೇಯದಲ್ಲಿದೆ ಎಂದು ತಿಳಿದುಬಂದಿದೆ. 


ಇದಲ್ಲದೆ, ನಿನ್ನೆ (ಭಾನುವಾರ 15 ಅಕ್ಟೋಬರ್) ದೆಹಲಿ ಮತ್ತು ಎನ್‌ಸಿ‌ಆರ್ ಭಾಗದಲ್ಲೂ ಕೂಡ ಪ್ರಬಲ ಭೂಕಂಪ ಸಂಭವಿಸಿದ್ದು ಹಲವೆಡೆ ಪೀಠೋಪಕರಣಗಳು ಅಲುಗಾಡಿರುವ ಬಗ್ಗೆಯೂ ವರದಿಯಾಗಿದೆ. 


https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz