ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ ಅನ್ಶುಲಾ ಕಾಂತ್ ಅವರನ್ನು ವಿಶ್ವ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಹಣಕಾಸು ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಶುಕ್ರವಾರ ಪ್ರಕಟಿಸಿದ್ದಾರೆ.


COMMERCIAL BREAK
SCROLL TO CONTINUE READING

"ವಿಶ್ವ ಬ್ಯಾಂಕ್ ಸಮೂಹ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಸಿಎಫ್‌ಒ ಆಗಿ ಅನ್ಶುಲಾ ಕಾಂತ್ ಅವರನ್ನು ನೇಮಕ ಮಾಡಲು ನನಗೆ ತುಂಬಾ ಸಂತೋಷವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿಎಫ್‌ಒ ಆಗಿ ತನ್ನ ಕೆಲಸದ ಮೂಲಕ ಅನ್ಶುಲಾ ಹಣಕಾಸು, ಬ್ಯಾಂಕಿಂಗ್ ಮತ್ತು ತಂತ್ರಜ್ಞಾನದ ಬಳಕೆಯಲ್ಲಿ 35 ವರ್ಷಗಳ ಪರಿಣತಿಯನ್ನು ಹೊಂದಿದ್ದಾರೆ" ಎಂದು ಮಾಲ್ಪಾಸ್ ಹೇಳಿದರು.


ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಮುಖ್ಯ ಹಣಕಾಸು ಅಧಿಕಾರಿಯಾಗಿ, ವಿಶ್ವ ಬ್ಯಾಂಕ್ ಸಮೂಹದ ಹಣಕಾಸು ಮತ್ತು ಅಪಾಯ ನಿರ್ವಹಣೆಯ ಜವಾಬ್ದಾರಿಯನ್ನು ಕಾಂತ್ ವಹಿಸಲಿದ್ದು, ಅವರು ಅಧ್ಯಕ್ಷರಿಗೆ ವರದಿ ಸಲ್ಲಿಸಲಿದ್ದಾರೆ. ಅನ್ಶುಲಾ ಕಾಂತ್ ಅವರು ಲೇಡಿ ಶ್ರೀ ರಾಮ್ ಕಾಲೇಜ್ ಫಾರ್ ವುಮೆನ್ ನಿಂದ ಅರ್ಥಶಾಸ್ತ್ರದಲ್ಲಿ ಪದವೀಧರರಾಗಿದ್ದಾರೆ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ನಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.