Anti Terror Operation: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಭಾರಿ ಹಿನ್ನಡೆ, ಪೂಂಚ್ ನಲ್ಲಿ JCO ಸೇರಿದಂತೆ ಐವರು ಯೋಧರು ಹುತಾತ್ಮ
Anti Terror Operation: ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನೆ (Indian Army) ಭಾರಿ ಹಿನ್ನಡೆ ಅನುಭವಿಸಿದೆ. ಸೋಮವಾರ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್ (Poonch) ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ JCO ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ.
Anti Terror Operation: ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನೆ (Indian Army) ಭಾರಿ ಹಿನ್ನಡೆ ಅನುಭವಿಸಿದೆ. ಸೋಮವಾರ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್ (Poonch) ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ JCO ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ. ವರದಿಗಳ ಪ್ರಕಾರ ಯೋಧರ ಒಂದು ಗುಂಪು ಶೋಧಕಾರ್ಯದಲ್ಲಿ ತೊಡಗಿದ್ದಾಗ ಈ ಯೋಧರು (Five Soldiers Martyred)ಹುತಾತ್ಮರಾಗಿದ್ದಾರೆ. ಸ್ಥಳವೊಂದರಲ್ಲಿ ಹೊಂಚು ಹಾಕಿ ಕುಳಿತ ಉಗ್ರರು ಸೈನಿಕರ ಮೇಲೆ ದಾಳಿ (Encounter) ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ JCO ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ. ಪ್ರಸ್ತುತ ಭಾರತೀಯ ಸೇನೆ ಹೆಚ್ಚುವರಿ ಪಡೆಯನ್ನು ಸ್ಥಳಕ್ಕೆ ರವಾನಿಸಿದೆ ಹಾಗೂ ಪ್ರದೇಶವನ್ನು ಸುತ್ತುವರೆಯಲಾಗಿದೆ. ದಾಳಿ ನಡೆಸಿರುವ ಉಗ್ರರ ಬೇಟೆ ಮುಂದುವರೆದಿದೆ.
ಇದನ್ನೂ ಓದಿ- 'ಧರ್ಮದ ಪ್ರತಿ ಗೌರವ ಹೆಚ್ಚಾಗಬೇಕು' ಮತಾಂತರದ ಕುರಿತು RSS ಮುಖ್ಯಸ್ಥ Mohan Bhagwat ಹೇಳಿದ್ದೇನು
ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಸುರನ್ಕೊಟ್ ನಲ್ಲಿ (Surankot Encounter) ಡಿಕೆಜಿ ಬಳಿಯ ಹಳ್ಳಿಯೊಂದರಲ್ಲಿ ಮುಂಜಾನೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಸೇನೆಯು ಪ್ರದೇಶವನ್ನು ಸುತ್ತುವರಿದಿದೆ. ಮೂರರಿಂದ ನಾಲ್ಕು ಭಯೋತ್ಪಾದಕರು ಅಲ್ಲಿ ಅವಿತುಕೊಂಡಿದ್ದಾರೆ ಎಂದು ನಂಬಲಾಗಿದೆ.
ಇದನ್ನೂ ಓದಿ-RBI New Rule: IMPS ನಿಧಿ ವರ್ಗಾವಣೆ ಮಿತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ
"ಕಾರ್ಯಾಚರಣೆಯ ವೇಳೆ ಉಗ್ರರು ಸೇನಾ ಜವಾನರ ಸರ್ಚ್ ಪಾರ್ಟಿಗಳ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ JCO ಸಮೇತ ಇತರ ನಾಲ್ವರು ಜವಾನರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂತರ ಎಲ್ಲಾ ಐವರು ಸೈನಿಕರು ತಮ್ಮ ಗಾಯಗಳಿಗೆ ಬಲಿಯಾಗಿದ್ದಾರೆ" ಎಂದು ವಕ್ತಾರರು ಹೇಳಿದ್ದಾರೆ. ಗಂಭೀರವಾಗಿ ಗಾಯಗೊಂಡ ಜೆಸಿಒ ಮತ್ತು ನಾಲ್ಕು ಜವಾನರನ್ನು ಹತ್ತಿರದ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಯಿತು, ಆದರೆ ಅಲ್ಲಿಗೆ ಹೋಗುವಷ್ಟರಲ್ಲಿ ಅವರು ಅಸುನೀಗಿದ್ದರು ಎಂದು ಅವರು ಹೇಳಿದ್ದಾರೆ. ಕಾರ್ಯಾಚರಣೆ (Jammu And Kashmir Encounter) ಇನ್ನೂ ಮುಂದುವರಿದಿದೆ" ಎಂದು ಸೇನೆಯು ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ-Power Crisis:ಮಹಾರಾಷ್ಟ್ರದಲ್ಲಿ ವಿದ್ಯುತ್ ಬಿಕ್ಕಟ್ಟು, ಕಲ್ಲಿದ್ದಲು ಕೊರತೆಯಿಂದ 13 ಘಟಕಗಳು ಬಂದ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ