ಎಫ್.ಡಿ.ಎ ಹುದ್ದೆ ಪರೀಕ್ಷಾ ಪೂರ್ವ ತರಬೇತಿ: ಭಾಗವಹಿಸಲು ಹೆಸರು ನೋಂದಾಯಿಸಿ
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಎಫ್.ಡಿ.ಎ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದ್ದು, ಭಾಗವಹಿಸಲಿಚ್ಛಿಸುವ ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ತಿಳಿಸಿದ್ದಾರೆ.
ಬೆಂಗಳೂರು: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಎಫ್.ಡಿ.ಎ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದ್ದು, ಭಾಗವಹಿಸಲಿಚ್ಛಿಸುವ ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ತಿಳಿಸಿದ್ದಾರೆ.
ಇದನ್ನೂ ಓದಿ-LPG Cylinder:ಅಡುಗೆ ಅನಿಲ ಸಿಲಿಂಡರ್ ನಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ, ಮಹಿಳೆಯರಿಗೆ ಸಿಗಲಿದೆ ಲಾಭ
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲ್ಪಟ್ಟ್ಟಿರುವ 'ಪ್ರಥಮ ದರ್ಜೆ ಸಹಾಯಕ' ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಡಿಸೆಂಬರ್ 08 ರಿಂದ 20 ರವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತು ಪಡಿಸಿ) ಆಯೋಜಿಸಲಾಗಿದೆ.
ಈ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮಕ್ಕೆ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಇಂದೇ ಕೊನೆಯದಿನವಾಗಿದೆ.ಆದ್ದರಿಂದ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಈ ಮೂಲಕ ಕೋರಲಾಗಿದೆ.
ಇದನ್ನೂ ಓದಿ-ಮನೆಯ ಟೆರೆಸ್ ಮೇಲೆ ಉಚಿತವಾಗಿ ಸೋಲಾರ್ ಪ್ಯಾನಲ್ ಅಳವಡಿಸಿ, 20 ವರ್ಷ ಉಚಿತ ವಿದ್ಯುತ್ ಪಡೆಯಿರಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮೊದಲನೇ ಮಹಡಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಂಕೀರ್ಣ, ಕೊಪ್ಪಳ ದೂರವಾಣಿ ಸಂಖ್ಯೆ: 08539-220859, 9880655101 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ