Army Truck Accident : ಭೀಕರ ಸೇನಾ ಟ್ರಕ್‌ ಅಪಘಾತ.. 16 ಯೋಧರ ಸಾವು..!

ಉತ್ತರ ಸಿಕ್ಕಿಂನಲ್ಲಿ ನಡೆದ ಸೇನಾ ಟ್ರಕ್ ಅಪಘಾತದಲ್ಲಿ 16 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಯೋಧರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಕ್ಕಿಂನ ಜಾಮಾದಲ್ಲಿ ಶುಕ್ರವಾರ ಸೇನಾ ಟ್ರಕ್ ಅಪಘಾತಕ್ಕೀಡಾಗಿದೆ ಎಂದು ಭಾರತೀಯ ಸೇನೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

Written by - Krishna N K | Last Updated : Dec 23, 2022, 04:45 PM IST
  • ಉತ್ತರ ಸಿಕ್ಕಿಂನಲ್ಲಿ ನಡೆದ ಸೇನಾ ಟ್ರಕ್ ಅಪಘಾತದಲ್ಲಿ 16 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ.
  • ನಾಲ್ವರು ಯೋಧರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.
  • ಗಾಯಗೊಂಡ ನಾಲ್ವರು ಯೋಧರನ್ನು ವಿಮಾನದ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Army Truck Accident : ಭೀಕರ ಸೇನಾ ಟ್ರಕ್‌ ಅಪಘಾತ.. 16 ಯೋಧರ ಸಾವು..! title=

Army Truck Accident : ಉತ್ತರ ಸಿಕ್ಕಿಂನಲ್ಲಿ ನಡೆದ ಸೇನಾ ಟ್ರಕ್ ಅಪಘಾತದಲ್ಲಿ 16 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಯೋಧರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿಕ್ಕಿಂನ ಜಾಮಾದಲ್ಲಿ ಶುಕ್ರವಾರ ಸೇನಾ ಟ್ರಕ್ ಅಪಘಾತಕ್ಕೀಡಾಗಿದೆ ಎಂದು ಭಾರತೀಯ ಸೇನೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. 

ರಾಜ್ಯದ ರಾಜಧಾನಿ ಗ್ಯಾಂಗ್‌ಟಾಕ್‌ನಿಂದ 130 ಕಿಮೀ ದೂರದಲ್ಲಿರುವ ಲಾಚೆನ್‌ನಿಂದ 15 ಕಿಮೀ ದೂರದಲ್ಲಿರುವ ಜಾಮಾ 3ರಲ್ಲಿ ಬೆಳಿಗ್ಗೆ 8 ಗಂಟೆಗೆ ಅಪಘಾತ ಸಂಭವಿಸಿದೆ. ಅಪಘಾತದ ಸ್ಥಳದಿಂದ ಒಟ್ಟು 16 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನಾಲ್ವರು ಸೇನಾ ಸಿಬ್ಬಂದಿಯ ಸ್ಥಿತಿ ಇನ್ನೂ ತಿಳಿದುಬಂದಿಲ್ಲ. ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ: Covid-19 New Wave: ನಾಳೆಯಿಂದ ಬದಲಾಗಲಿದೆ ವಿಮಾನ ಪ್ರಯಾಣದ ನಿಯಮ

ಸೈನಿಕರು ಜೆಮಾ ಕಡೆಗೆ ಹೋಗುತ್ತಿದ್ದಾಗ, ವಾಹನವು ಶಾರ್ಪ್‌ ತಿರುವಿನಲ್ಲಿ ಸ್ಕಿಡ್ ಆಗಿ ಕೆಳಗಿನ ಕಣಿವೆಗೆ ಜಾಗಿ ಬಿದ್ದಿತು. ಅಪಘಾತ ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆ ತಂಡ ಸ್ಥಳಕ್ಕೆ ಧಾವಿಸಿ ಯೋಧರನ್ನು ರಕ್ಷಿಸಲು ಶತ ಪ್ರಯತ್ನ ನಡೆಸಿತು. ಗಾಯಗೊಂಡ ನಾಲ್ವರು ಯೋಧರನ್ನು ವಿಮಾನದ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದಲ್ಲಿ ದುರದೃಷ್ಟವಶಾತ್ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 13 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಅಲ್ಲದೆ, ದುರಂತದಲ್ಲಿ ಮೃತ ಪಟ್ಟ ಯೋಧರ ಕುಟುಂಬಗಳ ಬೆಂಬಲಕ್ಕೆ ನಿಂತಿದ್ದೇವೆ ಎಂದು ಸೇನೆ ಭರವಸೆ ತಿಳಿಸಿದೆ. ಉತ್ತರ ಸಿಕ್ಕಿಂ ಅತ್ಯಂತ ಅಪಾಯಕಾರಿ ಪ್ರದೇಶವಾಗಿದ್ದು, ಪ್ರಸ್ತುತ ಇಡೀ ಪ್ರದೇಶವು ಹಿಮದಿಂದ ಆವೃತವಾಗಿದೆ.

ಅಪಘಾತಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ. ಉತ್ತರ ಸಿಕ್ಕಿಂನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯ ಯೋಧರು ಪ್ರಾಣ ಕಳೆದುಕೊಂಡಿರುವುದಕ್ಕೆ ತೀವ್ರ ದುಃಖವಾಗಿದೆ. ಸೈನಿಕರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರವು ಪ್ರಾಮಾಣಿಕವಾಗಿ ಕೃತಜ್ಞತೆ ಸಲ್ಲಿಸುತ್ತದೆ ಎಂದಿದ್ದಾರೆ. ಮೃತರ ಕುಟುಂಬಗಳಿಗೆ ಧೈರ್ಯದ ಮಾತುಗಳು ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಕೇಂದ್ರ ಸಚಿವರು ಪ್ರಾರ್ಥಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News