ಮಧ್ಯಾಹ್ನದ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 20 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಆಂಧ್ರಪ್ರದೇಶದಲ್ಲಿ ಗುರುವಾರ ನಡೆದಿದೆ. 

Last Updated : Jul 11, 2019, 10:18 PM IST
ಮಧ್ಯಾಹ್ನದ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು title=

ಗುಂಟೂರು: ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 20 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಆಂಧ್ರಪ್ರದೇಶದಲ್ಲಿ ಗುರುವಾರ ನಡೆದಿದೆ. 

ಇಲ್ಲಿನ ತಡೇಪಲ್ಲಿ ಪಟ್ಟಣದ ರಾಮಕೃಷ್ಣ ಮಿಷನ್ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ ವಾಂತಿ ಮಾಡಿಕೊಂಡು ಪ್ರಜ್ಞಾಹೀನರಾದ ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.

ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕ್ರಮದ ಜವಾಬ್ದಾರಿ ಹೊತ್ತಿರುವ ಅಕ್ಷಯ ಪಾತ್ರಾ ಫೌಂಡೇಷನ್ ವತಿಯಿಂದ ಅನ್ನ, ಬೇಳೆ ಸಾರು ಮತ್ತು ಪಲ್ಯವನ್ನು ನೀಡಲಾಗಿತ್ತು ಎನ್ನಲಾಗಿದೆ. 

ಚಿಕಿತ್ಸೆ ಬಳಿಕ ಎಲ್ಲಾ ಮಕ್ಕಳೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಬಗ್ಗೆ ಯಾವುದೇ ತನಿಖೆ ಕೈಗೊಂಡಿಲ್ಲ ಎಂದು ಎಎನ್ಐ ವರದಿ ಮಾಡಿದೆ.
 

Trending News