Article 370 SC Verdict: ಸಂವಿಧಾನದ 370ನೇ ವಿಧಿ ರದ್ದು ಮಾಡುವ ಕೇಂದ್ರ ಸರ್ಕಾರದ 2019ರ ಕ್ರಮದ ಕುರಿತು ಸುಪ್ರೀಂ ಕೋರ್ಟ್ ಇಂದು (ಡಿಸೆಂಬರ್ 11) ತನ್ನ ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. 


COMMERCIAL BREAK
SCROLL TO CONTINUE READING

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು 16 ದಿನಗಳ ವಿಚಾರಣೆಯ ನಂತರ ಈ ವರ್ಷದ ಸೆಪ್ಟೆಂಬರ್ 5 ರಂದು 23 ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು. ಪೀಠವು ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೂ ಒಳಗೊಂಡಿತ್ತು.


ಇಂದು (ಡಿಸೆಂಬರ್ 11, 2023) ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಕುರಿತಂತೆ ಮಹತ್ವದ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠ, 'ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಸಾಂವಿಧಾನಿಕವಾಗಿದೆ' ಎಂದು ತಿಳಿಸಿದ್ದಾರೆ. 


ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿಗಳು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ ಆರ್ಟಿಕಲ್‌ 370 ರದ್ದು ಮಾಡಿರುವುದು ಜಮ್ಮು ಕಾಶ್ಮೀರದ ಅಭಿವೃದ್ಧಿಗೆ ಅಡ್ಡಿಯಾಗುವುದಿಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ. 


ಇದನ್ನೂ ಓದಿ- ವಯಸ್ಸು 27, ಲಂಡನ್‌ನಲ್ಲಿ ವಿದ್ಯಾಭ್ಯಾಸ: ಯಾರೀ ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?


ಆರ್ಟಿಕಲ್ 370 ತಾತ್ಕಾಲಿಕ ನಿಬಂಧನೆ: 
ಆರ್ಟಿಕಲ್ 370 ತಾತ್ಕಾಲಿಕ ನಿಬಂಧನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ರಚನಾ ಸಭೆಯ ಅನುಪಸ್ಥಿತಿಯಲ್ಲಿ ರಾಷ್ಟ್ರಪತಿಗಳು ಅದನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಳ್ಳಬಹುದು. ರಾಷ್ಟ್ರಪತಿ ಆಳ್ವಿಕೆಯಲ್ಲಿ ಸಂಸತ್ತು ಶಾಸಕಾಂಗ ಸಭೆಯ ಪಾತ್ರವನ್ನು ವಹಿಸುತ್ತದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ಜಾರಿಗೊಳಿಸುವ ನಿರ್ಧಾರವು ಮಾನ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆಯನ್ನು ಪರಿಗಣಿಸುವ ಅಗತ್ಯವನ್ನು ನ್ಯಾಯಾಲಯ ಪರಿಗಣಿಸುವುದಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು, ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದ ಪೂರ್ಣ ರಾಜ್ಯದ ಸ್ಥಿತಿಯನ್ನು ಪುನಃಸ್ಥಾಪಿಸಲು ಸಿಜೆಐ ಸೂಚಿಸಿದ್ದಾರೆ. 


ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ, ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲು ಅಸ್ತು: 
ಇನ್ನೂ ತಮ್ಮ ತೀರ್ಪಿನಲ್ಲಿ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲು ಅಸ್ತು ಎಂದಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ. 


ಇದನ್ನೂ ಓದಿ- ಟ್ಯಾಕ್ಸಿ ಡ್ರೈವರ್‌ ಹಾಗೂ ಮಹಿಳೆಯ ಗಲಾಟೆಯ ವಿಡಿಯೋ ವೈರಲ್


"ಸೆಪ್ಟೆಂಬರ್ 2024 ರೊಳಗೆ ಜಮ್ಮು ಮತ್ತು ಕಾಶ್ಮೀರ ಶಾಸಕಾಂಗ ಸಭೆಗೆ ಚುನಾವಣೆಗಳು ನಡೆಯುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಸಾಧ್ಯವಾದಷ್ಟು ಬೇಗ ರಾಜ್ಯತ್ವವನ್ನು ಮರುಸ್ಥಾಪಿಸಬೇಕು" ಎಂದು ಸಿಜೆಐ ಡಿವೈ ಚಂದ್ರಚೂಡ್ ತಿಳಿಸಿದ್ದಾರೆ. 


ನ್ಯಾಯಮೂರ್ತಿ ಎಸ್‌ಕೆ ಕೌಲ್: 
ಸಿಜೆಐ ತೀರ್ಪಿಗೆ ತಮ್ಮ ಸಹಮತ ವ್ಯಕ್ತಪಡಿಸಿದ ನ್ಯಾಯಮೂರ್ತಿ ಎಸ್‌ಕೆ ಕೌಲ್, ಜಮ್ಮು ಮತ್ತು ಕಾಶ್ಮೀರವನ್ನು ಇತರ ರಾಜ್ಯಗಳೊಂದಿಗೆ ಸಮಾನವಾಗಿ ತರಲು ಆರ್ಟಿಕಲ್  370 ಅನ್ನು ತರಲಾಗಿತ್ತು ಎಂದರು. ತಮ್ಮ ತೀರ್ಪು ಪ್ರಕಟಿಸುವ ವೇಳೆ ಕಾಶ್ಮೀರಿ ಪಂಡಿತರ ಬಗ್ಗೆಗೂ ಪ್ರಸ್ತಾಪಿಸಿದ ಜಸ್ಟಿಸ್ ಕೌಲ್, ರಾಜ್ಯದ ಪುರುಷರು, ಮಹಿಳೆಯರು ಮತ್ತು ಮಕ್ಕಳು ಭಾರೀ ಬೆಲೆ ತೆತ್ತಿದ್ದಾರೆ. ಇವೆಲ್ಲವನ್ನೂ ಸರಿಪಡಿಸಲು ಪ್ರದೇಶದ ಸಾಮಾಜಿಕ ರಚನೆಯ ಪುನಃಸ್ಥಾಪನೆ ಅಗತ್ಯವಿದೆ ಎಂದು ಅವರು ಹೇಳಿದರು.


"ಸತ್ಯ ಮತ್ತು ಸಮನ್ವಯ ಆಯೋಗ"ವನ್ನು ಸ್ಥಾಪಿಸಲು ನಾನು ಶಿಫಾರಸು ಮಾಡುತ್ತೇವೆ. ಈ ಆಯೋಗಕ್ಕೆ ಸರ್ಕಾರವು ವಿಧಾನ ಮತ್ತು ಉತ್ತಮ ಮಾರ್ಗವನ್ನು ರೂಪಿಸುತ್ತದೆ" ಎಂದು ನ್ಯಾಯಮೂರ್ತಿ ಎಸ್‌ಕೆ ಕೌಲ್ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.