ಇಂದಿರಾಗಾಂಧಿ, ಹಿಟ್ಲರ್ ಇಬ್ಬರೂ ಸರ್ವಾಧಿಕಾರಿಗಳು: ಅರುಣ್ ಜೇಟ್ಲಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಜರ್ಮನಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಇಬ್ಬರೂ ಸರ್ವಾಧಿಕರಿಗಳಂತೆ ಅಧಿಕಾರ ಸಾಧಿಸಿದ್ದವರು ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.

Last Updated : Jun 25, 2018, 06:53 PM IST
ಇಂದಿರಾಗಾಂಧಿ, ಹಿಟ್ಲರ್ ಇಬ್ಬರೂ ಸರ್ವಾಧಿಕಾರಿಗಳು: ಅರುಣ್ ಜೇಟ್ಲಿ title=

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಜರ್ಮನಿ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ಇಬ್ಬರೂ ತಮ್ಮ ರಾಷ್ಟ್ರಗಳಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ಸಾಂವಿಧಾನಿಕ ಸರ್ವಾಧಿಕಾರವಾಗಿಸಿ ಅಧಿಕಾರ ಸಾಧಿಸಿದ್ದರು ಎಂದು ಬಿಜೆಪಿ ನಾಯಕ ಅರುಣ್ ಜೇಟ್ಲಿ ಆರೋಪಿಸಿದ್ದಾರೆ.

ತುರ್ತು ಪರಿಸ್ಥಿತಿಯ ದಿನಗಳನ್ನು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಮೂರು ಭಾಗಗಳಲ್ಲಿ ಪ್ರಕಟಿಸುತ್ತಿರುವ ಅವರು ಮೊದಲನೇ ಭಾಗವನ್ನು ಭಾನುವಾರ ಹಾಗೂ ಎರಡನೇ ಭಾಗವನ್ನು ಸೋಮವಾರ ಪ್ರಕಟಿಸಿದ್ದಾರೆ. ಇದರ ಪ್ರಮುಖ ಅಂಶಗಳನ್ನು ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

1975ರ ಜೂನ್ 25ರಂದು ಪ್ರತಿಪಕ್ಷಗಳು ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಸಂಚು ಹೂಡಿವೆ ಎಂದು ವಾದಮಾಡಿ, ಸಂವಿಧಾನದ ವಿಧಿ 352ರ ಅಡಿಯಲ್ಲಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಇದು ಹಿಟ್ಲರ್ ಧೋರಣೆಯ ಅನುಕರಣೆಯಾಗಿತ್ತು. ಹಿಟ್ಲರ್ ತನ್ನ ಅಧಿಕಾರದಲ್ಲಿ ಸಂಸತ್‍ನ ಬಹುತೇಕ ಪ್ರತಿಪಕ್ಷ ನಾಯಕರನ್ನು ಬಂಧಿಸಿ, ಕಡಿಮೆ ಸಂಖ್ಯಾಬಲ ಹೊಂದಿದ್ದ ಸರ್ಕಾರವನ್ನು 2/3 ಬಹುಮತದ ಸರ್ಕಾರವನ್ನಾಗಿ ಪರಿವರ್ತಿಸಿದ್ದು ಇದೇ ರೀತಿ ಇಂದಿರಾ ಗಾಂಧಿಯವರು ಸಂಚು ರೂಪಿಸಿದ್ದರು ಎಂದು ಜೇಟ್ಲಿ ಹೇಳಿಕೊಂಡಿದ್ದಾರೆ.

Trending News