ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಸ್ಥಿರತೆ

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನೆಲೆಯಲ್ಲಿ, ಜೇಟ್ಲಿ ಆರೋಗ್ಯ ವಿಚಾರಿಸಲು ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ನಾಯಕರು ಏಮ್ಸ್ ಗೆ ಭೇಟಿ ನೀಡಿದ್ದರು.

Last Updated : Aug 10, 2019, 08:14 AM IST
ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯದಲ್ಲಿ ಸ್ಥಿರತೆ title=
File Image

ನವದೆಹಲಿ: ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಏಮ್ಸ್ ಆಸ್ಪತ್ರೆಯಿಂದ ವೈದ್ಯಕೀಯ ಬುಲೆಟಿನ್ ನೀಡಲಾಗಿದೆ. ಅರುಣ್ ಜೇಟ್ಲಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾದ ಕಾರಣ ಶುಕ್ರವಾರ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಅರುಣ್ ಜೇಟ್ಲಿಗೆ ಅಂತಃಸ್ರಾವಶಾಸ್ತ್ರಜ್ಞ ನೆಫ್ರಾಲಜಿಸ್ಟ್‌ಗಳು ಮತ್ತು ಹೃದ್ರೋಗ ತಜ್ಞರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಜೇಟ್ಲಿ ಆರೋಗ್ಯ ವಿಚಾರಿಸಲು ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ನಾಯಕರು ಏಮ್ಸ್ ಗೆ ಭೇಟಿ ನೀಡಿದ್ದರು. ಇಂದು ಬೆಳಿಗ್ಗೆ ಉಪರಾಷ್ಟ್ರಪತಿ  ವೆಂಕಯ್ಯ ನಾಯ್ಡು ಅವರು ಏಮ್ಸ್ ತಲುಪಿದ್ದಾರೆ.

ಶುಕ್ರವಾರ ರಾತ್ರಿ ಏಮ್ಸ್ ಹೊರಡಿಸಿದ ವೈದ್ಯಕೀಯ ಬುಲೆಟಿನ್ ನಲ್ಲಿ ಅರುಣ್ ಜೇಟ್ಲಿಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಜೇಟ್ಲಿ ಅವರ ರಕ್ತದೊತ್ತಡ ಸಾಮಾನ್ಯವಾಗಿದೆ. ಅವರ ಆರೋಗ್ಯವನ್ನು ಆಸ್ಪತ್ರೆಯ ಹಿರಿಯ ವೈದ್ಯರ ತಂಡ ಮೇಲ್ವಿಚಾರಣೆ ಮಾಡುತ್ತಿದೆ. ಅರುಣ್ ಜೇಟ್ಲಿ ಹೃದಯ-ನರ ವಿಭಾಗದ ಐಸಿಯುನಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಲಭಿಸಿದೆ.


ಏಮ್ಸ್ ನಿಂದ ವೈದ್ಯಕೀಯ ಬುಲೆಟಿನ್ ನೀಡಲಾಗಿದೆ.

ಕಳೆದ ವರ್ಷ ಮೂತ್ರ ಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅರುಣ್ ಜೇಟ್ಲಿ, ತಮ್ಮ ಆರೋಗ್ಯ ಸರಿಯಿಲ್ಲದ ಕಾರಣ ಈ ಬಾರಿ ಮೋದಿ ಸಂಪುಟದಲ್ಲಿ ತಮ್ಮನ್ನು ಸೇರಿಸಿಕೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೇಟ್ಲಿ ಮನವಿ ಮಾಡಿದ್ದರು. ಮೋದಿ ಅವರ ಹಿಂದಿನ ಸರ್ಕಾರದಲ್ಲಿ ಅರುಣ್ ಜೇಟ್ಲಿ ಸರ್ಕಾರದ ಪ್ರಬಲ ಮಂತ್ರಿಯಾಗಿದ್ದರು. ಜೇಟ್ಲಿ ಹಣಕಾಸು ಸಚಿವರಾಗಿದ್ದಾಗ, ಮೋದಿ ಸರ್ಕಾರವು ನೋಟು ರದ್ಧತಿ ಮತ್ತು ಜಿಎಸ್ಟಿ ಅಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಯಿತು.

Trending News