ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ (Delhi Assembly elections 2020) ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಸತತ ಮೂರನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷಿಸುತ್ತಿದ್ದು, ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ  ಸ್ಪರ್ಧಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಈ ಸಂದರ್ಭದಲ್ಲಿ ಕೇಜ್ರಿವಾಲ್ ರೋಡ್ ಶೋ ಕೂಡ ಮಾಡಲಿದ್ದಾರೆ. ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 'ನಾಳೆ ನಾನು ನಾಮಪತ್ರ ಸಲ್ಲಿಸಲು ಹೋಗುತ್ತೇನೆ. ನಿಮ್ಮ ಆಶೀರ್ವಾದ ಮತ್ತು ಶುಭಾಶಯಗಳನ್ನು ನೀಡಲು ನೀವು ಬಂದರೆ, ನನಗೆ ತುಂಬಾ ಸಂತೋಷವಾಗುತ್ತದೆ' ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ.


ಈ ಮೊದಲು ಈ ವಿಧಾನಸಭಾ ಕ್ಷೇತ್ರವನ್ನು ಗೋಲ್ ಮಾರ್ಕೆಟ್ ಅಸೆಂಬ್ಲಿ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು. ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು 1998 ಮತ್ತು 2003 ರ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಗೆದ್ದಿದ್ದರು.


2008 ರಲ್ಲಿ ಇದನ್ನು ನವದೆಹಲಿ ವಿಧಾನಸಭಾ ಸ್ಥಾನವಾಗಿ ಪರಿವರ್ತಿಸಲಾಯಿತು. 2008 ರಲ್ಲಿ, ಕಾಂಗ್ರೆಸ್ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ಹೊಸ ಸ್ಥಾನದಲ್ಲಿ ಸ್ಪರ್ಧಿಸಿ ಚುನಾವಣೆಯಲ್ಲಿ ಗೆದ್ದರು. ಆದರೆ 2013 ರ ಚುನಾವಣೆಯಲ್ಲಿ ನವದೆಹಲಿ ವಿಧಾನಸಭೆ ಸ್ಥಾನವು ಚರ್ಚೆಯ ಕೇಂದ್ರಕ್ಕೆ ಬಂದಾಗ. ಕೇಜ್ರಿವಾಲ್ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಿ ಶೀಲಾ ದೀಕ್ಷಿತ್‌ಗೆ ಸವಾಲು ಹಾಕಿದರು.


ಈ ಚುನಾವಣೆಯ ಸೋಲಿನ ನಂತರ, ಶೀಲಾ ದೀಕ್ಷಿತ್ ತಮ್ಮ ರಾಜಕೀಯ ಜೀವನದಿಂದ ಹೊರಗುಳಿದರು ಮತ್ತು ಕೇಜ್ರಿವಾಲ್ ದೆಹಲಿಯಲ್ಲಿ ಮಾತ್ರವಲ್ಲದೆ ದೇಶದ ರಾಜಕೀಯದಲ್ಲಿ ಪ್ರಮುಖ ನಾಯಕರಾಗಿ ಹೊರಹೊಮ್ಮಿದರು. ಇದರ ನಂತರ, ಅವರು 2015 ರ ವಿಧಾನಸಭಾ ಚುನಾವಣೆಯಲ್ಲಿ ಈ ಸ್ಥಾನದಿಂದ ಸುಲಭವಾಗಿ ಗೆದ್ದರು.