ನವದೆಹಲಿ: ಕಳೆದ ಬುಧವಾರದಿಂದ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ವಿರುದ್ಧ ಧರಣಿ ಸತ್ಯಾಗ್ರಹಕ್ಕೆ ಕುಳಿತಿರುವ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿಯವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಬಲ ವ್ಯಕ್ತಪಡಿಸಲು ಇಂದು ಪುದುಚೆರಿಗೆ ಪ್ರಯಾಣ ಬೆಳೆಸಲಿದ್ದಾರೆ. 


COMMERCIAL BREAK
SCROLL TO CONTINUE READING

ಚುನಾಯಿತ ಸರ್ಕಾರದ ಆಡಳಿತದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಪದೆ ಪದೆ ಹಸ್ತಕ್ಷೇಪ ಮಾಡುತ್ತಿರುವ ಹಿನ್ನಲೆಯಲ್ಲಿ ಈಗ ಸಿಎಂ ನಾರಾಯಣಸ್ವಾಮಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.ಈಗ ಇದಕ್ಕೆ ಬೆಂಬಲ ವ್ಯಕ್ತಪಡಿಸಿ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಪುದುಚೇರಿ ರಾಜ್ ನಿವಾಸ್ ಹೊರಗಡೆ ಇರುವ ಧರಣಿ ಸ್ಥಳಕ್ಕೆ ಮಧ್ಯಾಹ್ನದ ವೇಳೆ ತಲುಪಲಿದ್ದಾರೆ ಎಂದು ದೆಹಲಿ ಸಿಎಂ ಕಚೇರಿ ತಿಳಿಸಿದೆ. 


ಸಿಎಂ ನಾರಾಯಣಸಾಮಿಯಂತೆಯೇ, ಕೇಜ್ರಿವಾಲ್ ಕೂಡ 2015 ರಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಚುನಾಯಿತವಾದ ಸರ್ಕಾರದ ಜೊತೆಗೆ ಲೆಫ್ತಿನೆಂಟ್ ಗವರ್ನರ್ ಆಡಳಿತ ವಿಷಯದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.ಇದೇ ಕಾರಣಕ್ಕೆ ಕಳೆದ ಜೂನ್ ತಿಂಗಳಲ್ಲಿ ಕೇಜ್ರಿವಾಲ್ ತಮ್ಮ ಸಚಿವ ಸಂಪುಟದೊಂದಿಗೆ ಧರಣಿ ಕುಳಿತುಕೊಂಡಿದ್ದರು.