ನವದೆಹಲಿ: ಬಾಬ್ರಿ ಮಸೀದಿ ಧ್ವಂಸ  ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ, ಎಐಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸದುದ್ದೀನ್ ಒವೈಸಿ (Asaduddin Owaisi) ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟರ್‌ನಲ್ಲಿ ಶಾಯರಿ ಬರೆಯುವ ಮೂಲಕ ನಿರ್ಧಾರದ ಬಗ್ಗೆ ಅವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಅಸದುದ್ದೀನ್, " ವಹೀ ಕಾತಿಲ್, ವಹಿ ಮುಸಿಫ್ ಅದಾಲತ್ ಉಸ್ಕಿ, ವೋ ಶಹೀದ್, ಬಹುತ್ ಸೆ ಫೈಸಲೋ ಮೇ ಅಬ ತರಫ್ದಾರಿ ಭಿ ಹೋತಿ ಹೈ" ಎಂದು ಬರೆದುಕೊಂಡಿದ್ದಾರೆ. ಅಂದರೆ, " ಅದೇ ಕೊಲೆಗಾರ, ಅದೇ ನ್ಯಾಯಾಲಯ, ತುಂಬಾ ಪ್ರಕರಣಗಳಲ್ಲಿ ಇದೀಗ ಶಿಫಾರಸ್ಸು ಕೂಡ ನಡೆಯುತ್ತದೆ" ಎಂದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನು ಓದಿ- 'ಬಾಬ್ರಿ ಮಸೀದಿ ಇತ್ತು ಮತ್ತು ಇರಲಿದೆ, ಇನ್ಷಾ ಅಲ್ಲಾಹ್': Owaisi


"Ram Mandir ಕುರಿತು ಬಾಯ್ಮುಚ್ಚಿ, ಇಲ್ಲದಿದ್ದರೆ ಪಾಕಿಸ್ತಾನಕ್ಕೆ ಹೊರಟು ಹೋಗಿ" ಒವೈಸಿಗೆ ತಿರುಗೇಟು ನೀಡಿದ ಶಿಯಾ ವಕ್ಫ್ ಬೋರ್ಡ್ ಮುಖ್ಯಸ್ಥ


ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ Asaduddin Owaisi ಗಂಭೀರ ಹೇಳಿಕೆ


ಅಯೋಧ್ಯೆಯಲ್ಲಿ ಡಿಸೆಂಬರ್ 6, 1992ರಲ್ಲಿ ವಿವಾದಿತ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಇಂದು ತನ್ನ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ. ನ್ಯಾಯಾಲಯ ಈ ಪ್ರಕರಣದಲ್ಲಿ ಬಿಜೆಪಿಯ ವರಿಷ್ಠ ಮುಖಂಡ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಉಮಾ ಭಾರತಿ , ವಿನಯ್ ಕಟಿಯಾರ್ ಸೇರಿದಂತೆ ಎಲ್ಲ 32 ಆರೋಪಿಗಳನ್ನು ಸಾಕ್ಷಾಧಾರದ ಕೊರತೆಯ ಹಿನ್ನೆಲೆ ಖುಲಾಸೆಗೊಳಿಸಿದೆ ಎಂಬುದು ಇಲ್ಲಿ ಗಮನಾರ್ಹ.