Road Accident Today: 40ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಂಭೀರವಾಗಿ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಅಸ್ಸಾಂನ ದೇರ್ಗಾಂವ್‌ನಲ್ಲಿ ನಡೆದಿದೆ.
ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಗೋಲಾಘಾಟ್ ಪೂರ್ವ ತಹಸಿಲ್ ವ್ಯಾಪ್ತಿಗೆ ಬರುವ ದೇರ್ಗಾಂವ್ ಬಳಿಯ ಬಲಿಜನ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 37ರಲ್ಲಿ ನಡೆದ ಈ ಅಪಘಾತದಲ್ಲಿ ಮೃತರನ್ನು ಹೊರತುಪಡಿಸಿ, ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಅಸ್ಸಾಂನ ದೇರ್ಗಾಂವ್‌ನಲ್ಲಿ ಬುಧವಾರ ಮುಂಜಾನೆ 40 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಬಸ್ ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದಾಗ ನಿಂತಿದ್ದ ಕಲ್ಲಿದ್ದಲು ತುಂಬಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಪಿಕ್ನಿಕ್ ಪ್ರವಾಸದಲ್ಲಿದ್ದ 14 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ- ಟ್ರಾಕ್ಟರ್ ಇನೋವಾ ಕಾರ್ ನಡುವೆ ಅಪಘಾತ
ಲಭ್ಯವಿರುವ ಮಾಹಿತಿಗಳ ಪ್ರಕಾರ, ಈ ರಸ್ತೆ ಅಪಘಾತದಲ್ಲಿ ಸುಮಾರು 30 ಜನರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಜೋರ್ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಜೆಎಂಸಿಎಚ್) ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ನಾಲ್ಕರಿಂದ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಂಜಾನೆ ಮೂರು ಗಂಟೆಗೆ ಹೊರಟಿದ್ದ ಬಸ್:
ಮೃತ ದುರ್ದೈವಿಗಳು ಬೋಸಬೋರಹೊಳ್ಳ ಗ್ರಾಮದಿಂದ ಬೋಗಿಬೀಲ್‌ಗೆ ಇಂದು ಒಂದು ದಿನದ ಪಿಕ್ನಿಕ್ ಕೈಗೊಂಡಿದ್ದರು. ಪಿಕ್ನಿಕ್ ಜೊತೆಗೆ ಅವರು ಪ್ರಸಿದ್ಧ ತಿಲಿಂಗ ಮಂದಿರಕ್ಕೆ ಭೇಟಿ ನೀಡುವ ಯೋಜನೆಯನ್ನು ಹೊಂದಿದ್ದರು. ಆದರೆ ಮಾರ್ಗಮಧ್ಯೆ ಬಸ್ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ- ಮೈ ಕೊರೆಯುವ ಚಳಿಗೆ ತತ್ತರಿಸುತ್ತಿದೆ ಉತ್ತರ : ಈ ಪ್ರದೇಶಗಳಲ್ಲಿ ಕೋಲ್ಡ್ ಡೇ ಅಲರ್ಟ್ ಜಾರಿ
ಈ ರಸ್ತೆ ಅಪಘಾತದಲ್ಲಿ ಇದುವರೆಗೆ ಒಂದೇ ಕುಟುಂಬದ ಮೂರ್ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದಟ್ಟವಾದ ಮಂಜಿನಿಂದಾಗಿ ಗೋಚರತೆ ಕಡಿಮೆಯಾಗಿ ಚಾಲಕನ ಅತಿವೇಗವು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.