ನವದೆಹಲಿ: ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ ರಾಜ್ಯ ವಿಧಾನಸಭೆಗಳಲ್ಲಿ ತೆರವಾಗಿರುವ ನಾಲ್ಕು ಸ್ಥಾನಗಳಿಗೆ ನವೆಂಬರ್ 25ರಂದು ಉಪಚುನಾವಣೆ ನಡೆಯಲಿದೆ ಎಂದು ಭಾರತ ಚುನಾವಣಾ ಆಯೋಗ ಶುಕ್ರವಾರ ಘೋಷಿಸಿದೆ. 


COMMERCIAL BREAK
SCROLL TO CONTINUE READING

ಉತ್ತರಾಖಂಡದ ಪಿಥೋರಗರ್ ಮತ್ತು ಪಶ್ಚಿಮ ಬಂಗಾಳದ ಕಲಿಯಗಂಜ್, ಕರಿಂಪೂರ್ ಮತ್ತು ಖರಗ್‌ಪುರ್ ಸದರ್ ವಿಧಾನಸಭಾ ಕ್ಷೇತ್ರಗಳಿಗೆ ನ.25ರಂದು ಉಪಚುನಾವಣೆ ನಡೆಯಲಿದೆ. 


ವಿಧಾನಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ನವೆಂಬರ್ 6 ಕಡೆಯ ದಿನವಾಗಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ನವೆಂಬರ್ 11 ಕಡೆಯದಿನವಾಗಿದೆ. ಚುನಾವಣೆಯ ಮತಎಣಿಕೆ ನವೆಂಬರ್ 28 ರಂದು ನಡೆಯಲಿದೆ. ಚುನಾವಣೆ ಘೋಷಣೆಯಾದ ಕ್ಷೇತ್ರಗಳಲ್ಲಿ ಈ ಕ್ಷಣದಿಂದಲೇ ನೀತಿಸಂಹಿತೆ ಜಾರಿಯಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.