ನವದೆಹಲಿ: ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಮಹಾರಾಷ್ಟ್ರ ಮತ್ತು ಹರಿಯಾಣಕ್ಕೆ ಸಂಬಂಧಿಸಿದ ಚುನಾವಣಾ ಪ್ರಕಟಣೆಗೆ ಸಂಬಂಧಿಸಿದ ಕಿರುಪುಸ್ತಕವನ್ನು ಸಿದ್ಧಪಡಿಸುವಂತೆ ಚುನಾವಣಾ ಆಯೋಗ ತನ್ನ ಚುನಾವಣಾ ನಿರ್ವಹಣೆ ಮತ್ತು ಯೋಜನಾ ತಂಡವನ್ನು ಕೇಳಿದೆ.


COMMERCIAL BREAK
SCROLL TO CONTINUE READING

ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ದಿನಾಂಕಗಳ ಕುರಿತು ಚುನಾವಣಾ ಆಯೋಗ ಇಂದು ಸಂಜೆ 4 ಗಂಟೆಗೆ ಪ್ರಕಟಿಸುವ ಸಾಧ್ಯತೆ ಇದೆ. ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಒಂದು ಹಂತದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಒಂದರಿಂದ ಎರಡು ಹಂತಗಳಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ.


ಇಂದೇ ಚುನಾವಣಾ ದಿನಾಂಕ ಘೋಷಣೆಯಾದರೆ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಬಹುತೇಕ ಅಕ್ಟೋಬರ್ ಕೊನೆಯ ವಾರದ ವೇಳೆಗೆ ಚುನಾವಣಾ ನಡೆದು ಫಲಿತಾಂಶ ಹೊರಬರುವ ನಿರೀಕ್ಷೆಯಿದೆ.


ಆದಾಗ್ಯೂ, ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಘೋಷಣೆಯ ಕುರಿತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಎರಡೂ ಚುನಾವಣಾ ಆಯುಕ್ತರು ಶುಕ್ರವಾರ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಆದರೆ, ಈ ಕುರಿತು ಇಂದು ಯಾವುದೇ ಸಭೆ ಅಥವಾ ಪ್ರಕಟಣೆ ಇಲ್ಲ. ನಾಳೆಯೊಳಗೆ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಿಸಬಹುದು ಎಂದು ಹೇಳಲಾಗುತ್ತಿದೆ.


ಸದ್ಯ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಮಹಾರಾಷ್ಟ್ರಡ 288 ಮತ್ತು ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.