ದೆಹಲಿ: ಕರೋಲ್ ಬಾಘ್​ ಹೋಟೆಲ್​ನಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವ ದಹನ

ಅಗ್ನಿ ಅವಘಡ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

Last Updated : Feb 12, 2019, 08:26 AM IST
ದೆಹಲಿ: ಕರೋಲ್ ಬಾಘ್​ ಹೋಟೆಲ್​ನಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವ ದಹನ title=
Pic Courtesy: ANI

ನವದೆಹಲಿ: ದೆಹಲಿಯ ಕರೋಲ್ ಬಾಘ್​ನಲ್ಲಿರುವ ಅರ್ಪಿತ್ ಪ್ಯಾಲೇಸ್ ಹೋಟೆಲ್​ನಲ್ಲಿ ಇಂದು ಮುಂಜಾನೆ 4:30 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಮೊದಲಿಗೆ ಹೋಟೆಲ್​ನ ನಾಲ್ಕನೇ ಅಂತಸ್ತಿನಲ್ಲಿ ಕಾಣಿಸಿಕೊಂಡ ಅಗ್ನಿ ಕ್ಷಣಮಾತ್ರದಲ್ಲಿ ಹೋಟೆಲ್ ಅನ್ನು ಆವರಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 9 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.

ಶಾರ್ಟ್​ ಸರ್ಕ್ಯೂಟ್​ನಿಂದ​ ಈ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಬಳಿಕ ಸತ್ಯಾಸತ್ಯತೆ ಬೆಳಕಿಗೆ ಬರಬೇಕಿದೆ.

Trending News