ದೆಹಲಿ: ಕರೋಲ್ ಬಾಘ್ ಹೋಟೆಲ್ನಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವ ದಹನ
ಅಗ್ನಿ ಅವಘಡ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ನವದೆಹಲಿ: ದೆಹಲಿಯ ಕರೋಲ್ ಬಾಘ್ನಲ್ಲಿರುವ ಅರ್ಪಿತ್ ಪ್ಯಾಲೇಸ್ ಹೋಟೆಲ್ನಲ್ಲಿ ಇಂದು ಮುಂಜಾನೆ 4:30 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಮೊದಲಿಗೆ ಹೋಟೆಲ್ನ ನಾಲ್ಕನೇ ಅಂತಸ್ತಿನಲ್ಲಿ ಕಾಣಿಸಿಕೊಂಡ ಅಗ್ನಿ ಕ್ಷಣಮಾತ್ರದಲ್ಲಿ ಹೋಟೆಲ್ ಅನ್ನು ಆವರಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 9 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.
ಶಾರ್ಟ್ ಸರ್ಕ್ಯೂಟ್ನಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ಬಳಿಕ ಸತ್ಯಾಸತ್ಯತೆ ಬೆಳಕಿಗೆ ಬರಬೇಕಿದೆ.