ಬಿಹಾರದಲ್ಲಿ ಬಾಯ್ಲರ್ ಸ್ಫೋಟಗೊಂಡು ಮೂವರ ಸಾವು

ಬಿಹಾರದ ಮೋತಿಹಾರಿ ಜಿಲ್ಲೆಯ ಎನ್‌ಜಿಒವೊಂದರ ಅಡುಗೆಮನೆಯಲ್ಲಿ ಶನಿವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಈ ದುರಂತ ಮೋತಿಹರಿಯ ಸುಗೌಲಿಯಲ್ಲಿ ನಡೆದಿದೆ ಎನ್ನಲಾಗಿದೆ.

Last Updated : Nov 16, 2019, 11:40 AM IST
ಬಿಹಾರದಲ್ಲಿ ಬಾಯ್ಲರ್ ಸ್ಫೋಟಗೊಂಡು ಮೂವರ ಸಾವು

ನವದೆಹಲಿ: ಬಿಹಾರದ ಮೋತಿಹಾರಿ ಜಿಲ್ಲೆಯ ಎನ್‌ಜಿಒವೊಂದರ ಅಡುಗೆಮನೆಯಲ್ಲಿ ಶನಿವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಈ ದುರಂತ ಮೋತಿಹರಿಯ ಸುಗೌಲಿಯಲ್ಲಿ ನಡೆದಿದೆ ಎನ್ನಲಾಗಿದೆ.

'ನವ ಪ್ರಯಾಸ್ ಸಂಸ್ಥಾ' ಎಂಬ ಎನ್‌ಜಿಒ ಸದಸ್ಯರು ಮಧ್ಯಾಹ್ನದ ಊಟವನ್ನು ತಯಾರಿಸುತ್ತಿದ್ದಾಗ ಬಾಯ್ಲರ್ ಸ್ಫೋಟಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ಪರಿಹಾರ ಮತ್ತು ಸ್ಫೋಟದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡುವ ವೆಚ್ಚವನ್ನೂ ಸರ್ಕಾರ ಬರಿಸಲಿದೆ ಎಂದು ಸಿಎಂ ನಿತೀಶ್ ಕುಮಾರ್ ಘೋಷಿಸಿದ್ದಾರೆ.

ಈ ಘಟನೆಯಲ್ಲಿ ಇದುವರೆಗೆ ಮೂವರ ಸಾವನ್ನು ಖಚಿತಪಡಿಸಿದ್ದು, ಇತರ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಬಿಹಾರ ಸರ್ಕಾರದ ಅಧಿಕಾರಿಗಳು ಸ್ಫೋಟದ ಸ್ಥಳವನ್ನು ತಲುಪಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದುವರೆಗೆ ಬಾಯ್ಲರ್ ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ ಎನ್ನಲಾಗಿದೆ. 

More Stories

Trending News