ನವದೆಹಲಿ: ಬಿಹಾರದ ಮೋತಿಹಾರಿ ಜಿಲ್ಲೆಯ ಎನ್‌ಜಿಒವೊಂದರ ಅಡುಗೆಮನೆಯಲ್ಲಿ ಶನಿವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಈ ದುರಂತ ಮೋತಿಹರಿಯ ಸುಗೌಲಿಯಲ್ಲಿ ನಡೆದಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

'ನವ ಪ್ರಯಾಸ್ ಸಂಸ್ಥಾ' ಎಂಬ ಎನ್‌ಜಿಒ ಸದಸ್ಯರು ಮಧ್ಯಾಹ್ನದ ಊಟವನ್ನು ತಯಾರಿಸುತ್ತಿದ್ದಾಗ ಬಾಯ್ಲರ್ ಸ್ಫೋಟಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ಪರಿಹಾರ ಮತ್ತು ಸ್ಫೋಟದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡುವ ವೆಚ್ಚವನ್ನೂ ಸರ್ಕಾರ ಬರಿಸಲಿದೆ ಎಂದು ಸಿಎಂ ನಿತೀಶ್ ಕುಮಾರ್ ಘೋಷಿಸಿದ್ದಾರೆ.


ಈ ಘಟನೆಯಲ್ಲಿ ಇದುವರೆಗೆ ಮೂವರ ಸಾವನ್ನು ಖಚಿತಪಡಿಸಿದ್ದು, ಇತರ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಬಿಹಾರ ಸರ್ಕಾರದ ಅಧಿಕಾರಿಗಳು ಸ್ಫೋಟದ ಸ್ಥಳವನ್ನು ತಲುಪಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದುವರೆಗೆ ಬಾಯ್ಲರ್ ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ ಎನ್ನಲಾಗಿದೆ.