ಪುಲ್ವಾಮ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಆರ್ಪಿಎಫ್ ಸಿಬ್ಬಂದಿ ನಿಧನ
ರೈಲ್ವೆ ರಕ್ಷಣಾ ಪಡೆಯ ಸಬ್ ಇನ್ಸ್‌ಪೆಕ್ಟರ್ ದೇವ್ ರಾಜ್ ಮೃತರು. ಪುಲ್ವಾಮಾ ದಾಳಿಯಲ್ಲಿ ಗಾಯಗೊಂಡ ಇವರು ಎಸ್‌ಎಂಹೆಚ್‌ಎಸ್‌ನ ಐಸಿಯು ವಾರ್ಡ್ 17ರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶ್ರೀನಗರ : ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಾಕಾಪುರ ಪ್ರದೇಶದಲ್ಲಿ ಏಪ್ರಿಲ್ 18ರಂದು ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿ ಶ್ರೀನಗರದ ಎಸ್‌ಹೆಚ್‌ಎಂಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈಲ್ವೆ ರಕ್ಷಣಾ ಪಡೆಯ ಸಬ್ ಇನ್ಸ್‌ಪೆಕ್ಟರ್ ದೇವ್ ರಾಜ್ ಮೃತರು. ಪುಲ್ವಾಮಾ ದಾಳಿಯಲ್ಲಿ ಗಾಯಗೊಂಡ ಇವರು ಎಸ್‌ಎಂಹೆಚ್‌ಎಸ್‌ನ ಐಸಿಯು ವಾರ್ಡ್ 17ರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ: ಬಮೂಲ್ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ: ತನಿಖೆಗೆ ಸರ್ಕಾರದ ಆದೇಶ
ಏಪ್ರಿಲ್ 18ರ ಸೋಮವಾರ ಸಂಜೆ ದಕ್ಷಿಣ ಕಾಶ್ಮೀರದ ಕಾಕಪೋರಾ ಪ್ರದೇಶದಲ್ಲಿ ಬಂದೂಕುಧಾರಿಯೊಬ್ಬ ಬಂದು ರೈಲ್ವೆ ರಕ್ಷಣಾ ಪಡೆಯ ಇಬ್ಬರು ಸಿಬ್ಬಂದಿಯ ಮೇಲೆ ಹಿಂದಿನಿಂದ ಗುಂಡು ಹಾರಿಸಿದ್ದ. ಘಟನೆಯಲ್ಲಿ ಹೆಚ್‌ಸಿ ಸುರೀಂದರ್ ಕುಮಾರ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಬ್ ಇನ್ಸ್‌ಪೆಕ್ಟರ್ ದೇವ್‌ರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಈ ಸಂಬಂಧ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಘಟನೆ ಹಿನ್ನೆಲೆ:
ಪುಲ್ವಾಮಾದ ಕಾಕಪೋರಾ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ರೈಲ್ವೇ ಪೊಲೀಸ್ ಪಡೆ ಸಿಬ್ಬಂದಿ ನಿಲ್ದಾಣದ ಹೊರಗಡೆ ಇರುವ ಟೀ ಸ್ಟಾಲ್ನಲ್ಲಿ ಚಹಾ ಸೇವನೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಉಗ್ರರು ಆರ್ಪಿಎಫ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮತ್ತೋರ್ವ ಅಧಿಕಾರಿ ದೇವ್ ರಾಜ್ ಗಾಯಗೊಂಡಿದ್ದು, ಅವರನ್ನು ಇಲ್ಲಿನ ಎಸ್‌ಎಂಹೆಚ್‌ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಇನ್ನು ಕಾಕಪೋರಾದಲ್ಲಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಉಗ್ರರಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.
ಇದನ್ನು ಓದಿ: ವರ್ಗಾವಣೆ ರದ್ಧತಿಯಾಗಲು 24 ವಿದ್ಯಾರ್ಥಿನಿಯರನ್ನು ಕೂಡಿ ಹಾಕಿದ್ದ ಶಿಕ್ಷಕರು!
ಇನ್ನು ಕಳೆದ ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ನಾಲ್ವರು ಎಲ್ಇಟಿ ಭಯೋತ್ಪಾದಕರ ಹತ್ಯೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಈ ದುಷ್ಕೃತ್ಯ ನಡೆದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.