ಶ್ರೀನಗರ: ಶ್ರೀನಗರದ ಬಿಎಸ್ಎಫ್ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಒಬ್ಬ ಸೈನಿಕ ಹುತಾತ್ಮರಾಗಿದ್ದು, ಇಬ್ಬರು ಸೈನಿಕರಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ. 


COMMERCIAL BREAK
SCROLL TO CONTINUE READING

ಶ್ರೀನಗರದ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಬಿಎಸ್ಎಫ್ ನ 182 ಬೆಟಾಲಿಯನ್ ಅನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಭಯೋತ್ಪಾದಕರ ಮೇಲೆ ಪ್ರತಿ ದಾಳಿ ನಡೆಸಿದ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.


ಮಂಗಳವಾರ ಬೆಳಿಗ್ಗೆ 4:30ರ ವೇಳೆಗೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಸತತ ಆರು ಗಂಟೆಗಳ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ದಾಳಿಯ ಜವಾಬ್ದಾರಿಯನ್ನು ಜೈಶ್-ಎ-ಮೊಹಮ್ಮದ್ ಭಯೋತ್ಪಾದನಾ ಸಂಘಟನೆ ವಹಿಸಿಕೊಂಡಿದೆ. 


ದಾಳಿ ನಡೆದಿರುವ ಪ್ರದೇಶವನ್ನು ಶ್ರೀನಗರದಲ್ಲಿ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ. ದಾಳಿಯ ನಂತರ, ಶ್ರೀನಗರದಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ವಹಿಸಿದ್ದು, ಶ್ರೀನಗರದ ವಿಮಾನ ನಿಲ್ದಾಣದ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.