Ayodhya : ಅಯೋಧ್ಯೆಯಲ್ಲಿ ರಾಮ ಮಂದಿರದ ಬಳಿ ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ.!

Attack On Congress leaders in Ayodhya : ಅಯೋಧ್ಯೆಗೆ ರಾಮಲಲ್ಲಾ ನನ್ನು ನೋಡಲು ಹೋದ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 

Written by - Chetana Devarmani | Last Updated : Jan 15, 2024, 08:35 PM IST
  • ಅಯೋಧ್ಯೆಗೆ ಹೋದ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ
  • ಅಯೋಧ್ಯೆಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ ಆರೋಪ
  • ಪಕ್ಷದ ಧ್ವಜವನ್ನು ಹರಿದು ಹಾಕಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್
Ayodhya : ಅಯೋಧ್ಯೆಯಲ್ಲಿ ರಾಮ ಮಂದಿರದ ಬಳಿ ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ.! title=
ಅಯೋಧ್ಯೆ

Ayodhya News : ಅಯೋಧ್ಯೆಗೆ ರಾಮಲಲ್ಲಾ ನನ್ನು ನೋಡಲು ಹೋದ ಕಾಂಗ್ರೆಸ್ ನಾಯಕರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಕೈ ಮುಖಂಡರನ್ನು ಥಳಿಸಿ ಪಕ್ಷದ ಧ್ವಜವನ್ನು ಹರಿದು ಹಾಕಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಯುಪಿ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ, ಈ ಕಾಂಗ್ರೆಸ್‌ ಮುಖಂಡರು ಮಕರ ಸಂಕ್ರಾಂತಿಯಂದು ಸರಯೂ ಸ್ನಾನ ಮಾಡಿ, ನಂತರ ರಾಮ ಲಾಲ್ಲಾ ದರ್ಶನಕ್ಕೆ ಹೋಗುತ್ತಿದ್ದರು. ದೇವಸ್ಥಾನದ ಹೊರಗೆ ಕಾಂಗ್ರೆಸ್ ಮುಖಂಡರನ್ನು ಸುತ್ತುವರಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.  

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರಾಯ್ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸೋಮವಾರ ಅಯೋಧ್ಯೆಗೆ ತೆರಳಿದ್ದರು. ಸರಯುವಿನಲ್ಲಿ ಸ್ನಾನ ಮುಗಿಸಿ ರಾಮ ಮಂದಿರಕ್ಕೆ ಭೇಟಿ ನೀಡಲು ಕಾಂಗ್ರೆಸ್ ನಾಯಕರು ಹೊರಟಿದ್ದರು. ಕೆಲವು ನಾಯಕರು ದೇವಸ್ಥಾನಕ್ಕೆ ಪ್ರವೇಶಿಸಿದರು ಮತ್ತು ಕೆಲವರು ಹೊರಗೆ ಇದ್ದರು. ಈ ವೇಳೆ ಕಾಂಗ್ರೆಸ್ ಧ್ವಜವನ್ನು ನೋಡಿದ ಕೆಲವರು ಆಕ್ರೋಶಗೊಂಡರು. ಬಳಿಕ ವಾಗ್ವಾದ ಕಾಂಗ್ರೆಸ್‌ ಧ್ವಜದ ವಿಚಾರವಾಗಿ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ ಅನೋಖೆ ಲಾಲ್ ಅವರ ಕೈಯಿಂದ ಧ್ವಜವನ್ನು ಕಿತ್ತುಕೊಂಡ ಪುಂಡರು ಅದನ್ನು ಹರಿದು ಹಾಕಿದ್ದಾರೆ.

ಇದನ್ನೂ ಓದಿ: ಮಕರ ಸಂಕ್ರಾಂತಿ ಪ್ರಯುಕ್ತ ಗೋವುಗಳಿಗೆ ಆಹಾರ ನೀಡಿದ ಮೋದಿ... 

ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯ ಮೇಲೂ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಕಾಂಗ್ರೆಸ್‌ ಮುಖಂಡರ ಮೇಲೆ ಹಲ್ಲೆ ಮಾಡುತ್ತಿದ್ದಾಗ ಭಧ್ರತಾ ಸಿಬ್ಬಂದಿ ಮಧಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ದಾಳಿ ನಡೆಸಿದವರು ಬಿಜೆಪಿಯವರು ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಮಾತನಾಡಿದ ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ, ಇದನ್ನು ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಜನವರಿ 22 ರಂದು ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್‌ನ ಉನ್ನತ ನಾಯಕರು ತಿರಸ್ಕರಿಸಿದ್ದರೂ, ಪಕ್ಷದ ಉತ್ತರ ಪ್ರದೇಶ ಘಟಕವು 'ಮಕರ ಸಂಕ್ರಾಂತಿ'ಯಂದು ದೇವಾಲಯಕ್ಕೆ ಭೇಟಿ ನೀಡುತ್ತು. ಕಾಂಗ್ರೆಸ್ಸಿಗರು ಸರಯುನಲ್ಲಿ ಪವಿತ್ರ ಸ್ನಾನ ಮಾಡಿ ನಂತರ ಹನುಮಾನ್ ಗರ್ಹಿ ದೇವಸ್ಥಾನ ಮತ್ತು ರಾಮ್ ಲಾಲ್ಲಾ ದರ್ಶನ ಪಡೆಯಲಿದ್ದರು ಎಂದು ಕಾಂಗ್ರೆಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಜನವರಿ 17 ರಂದು ಗರ್ಭಗುಡಿ ಪ್ರವೇಶಿಸಲಿರುವ ಶ್ರೀ ರಾಮ! ಆ ದಿನದ ಶೃಂಗಾರ ಹೇಗಿರಲಿದೆ ಗೊತ್ತಾ ? 

ಅಯೋಧ್ಯೆಯಲ್ಲಿ ರಾಜಕೀಯ ಬಿಸಿಯಾಗಿದೆ. ಜನವರಿ 22 ರಂದು ದೇವಸ್ಥಾನದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಭವ್ಯ ಸಮಾರಂಭದಲ್ಲಿ ಭಾಗವಹಿಸಲು ದೇಶ ಮತ್ತು ಪ್ರಪಂಚದಾದ್ಯಂತದ ಅನೇಕ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ವಿರೋಧ ಪಕ್ಷಗಳ ನಾಯಕರಿಗೂ ಆಹ್ವಾನ ನೀಡಲಾಗಿದೆ. ಆದರೆ ವಿರೋಧ ಪಕ್ಷದ ಬಹುತೇಕ ನಾಯಕರು ಇದರಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ. ಕೇವಲ ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News