ನವದೆಹಲಿ: ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ ನ್ಯಾಯಪೀಠವು 2018 ರ ಜನವರಿ 10 ರಂದು ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಗಳ ವಿಚಾರಣೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿಗಳಾದ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿ ಎನ್.ವಿ.ರಮಣ, ಯು.ಯು.ಲಲಿತ್ ಮತ್ತು ಡಿ.ವೈ.ಚಂದ್ರಚೂದ್ ಅವರನ್ನೊಳಗೊಂಡ ಪೀಠ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ 14 ಅರ್ಜಿಗಳ ವಿಚಾರಣೆ ನಡೆಸಲಿದೆ.
Five-judge bench led by Chief Justice of India Ranjan Gogoi will hear the Ayodhya case. Other four judges are Justice SA Bobde, Justice NV Ramana, Justice UU Lalit and Justice DY Chandrachud. https://t.co/MeIQq64EpJ
— ANI (@ANI) January 8, 2019
2010ರಲ್ಲಿ ಈ ವಿವಾದದ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್ ಈ 2.77 ಎಕರೆ ವಿವಾದಿತ ಪ್ರದೇಶವನ್ನು ರಾಮಲಲ್ಲಾ, ಸುನ್ನಿ ವಕ್ಫ್ ಬೋರ್ಡ್ ಮತ್ತು ನಿರ್ಮೋಹಿ ಈ ಮೂವರಿಗೆ ಸಮನಾಗಿ ಹಂಚಿಕೆ ಮಾಡಿ ತೀರ್ಪು ಕೊಟ್ಟಿತ್ತು. ಆ ತೀರ್ಪನ್ನು ಪ್ರಶ್ನಿಸಿ ಸಾಕಷ್ಟು ಮೇಲ್ಮನವಿಗಳು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದವು.
ಈ ಮೊದಲು ಕಳೆದ ವರ್ಷ ಅಕ್ಟೋಬರ್ 29ರಂದು ಸುಪ್ರೀಂ ಕೋರ್ಟ್ ಅಯೋಧ್ಯೆ ಕೇಸನ್ನು ಸೂಕ್ತ ಪೀಠವು ಜನವರಿ ಮೊದಲ ವಾರದಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿತ್ತು. ಅದರಂತೆ ಜನವರಿ 4ರಂದು ವಿಚಾರಣೆಯನ್ನು ಜನವರಿ 10ಕ್ಕೆ ಮುಂದೂಡಿತ್ತು.