ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದವನ್ನು ದಾವೆದಾರರು ಪರಸ್ಪರ ರಾಜೀ ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.


COMMERCIAL BREAK
SCROLL TO CONTINUE READING

ಸುಪ್ರೀಂಕೋರ್ಟ್ ತೀರ್ಪಿನ ಹೈಲೈಟ್ಸ್:


- ದಶಕಗಳ ಕಾಲ ಹಿಂದೂ ಮತ್ತು ಮುಸ್ಲಿಂ ಬಾಂಧವರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಧಾನದ ಮುಖಾಂತರವೇ ಶಾಶ್ವತ ಪರಿಹಾರ ಕಂಡು ಕೊಳ್ಳಿ.


- ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮೂವರು ಸಂಧಾನಕಾರರ ನೇಮಕ.


-  ಈ ಪ್ರಕ್ರಿಯೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಎಫ್.ಎಂ. ಖಾಲಿಫುಲ್ಲಾ ನೇತೃತ್ವ ವಹಿಸಲಿದ್ದು, ಶ್ರೀ ಶ್ರೀ ರವಿಶಂಕರ್ ಮತ್ತು ಹಿರಿಯ ವಕೀಲ ಶ್ರೀರಾಮ್ ಪಂಚೂ ಸಂಧಾನ ಸಮಿತಿಯಲ್ಲಿರಲಿದ್ದಾರೆ.


- ಸಂಧಾನ ಪ್ರಕ್ರಿಯೆ ನಾಲ್ಕು ವಾರಗಳೊಳಗೆ ಆರಂಭಗೊಂಡು ಎಂಟು ವಾರಗಳ ಒಳಗೆ ಪೂರ್ಣಗೊಳ್ಳಬೇಕು.


- ಸಮಿತಿಯು ನಾಲ್ಕು ವಾರಗಳಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆಯ ಕುರಿತು ಮೊದಲ ಸ್ಥಿತಿ ವರದಿ ಸಲ್ಲಿಸಬೇಕು.


- ಫೈಜಾಬಾದ್‌ನಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯಬೇಕು.


-  ಮಧ್ಯಸ್ಥಿಕೆ ಪ್ರಕ್ರಿಯೆಗಳನ್ನು ಕ್ಯಾಮರಾದಲ್ಲಿ ಸೆರೆಹಿಡಿಯಬೇಕು.  


- ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಮಾಧ್ಯಮವನ್ನು ಮಧ್ಯಸ್ಥಿಕೆ ಪ್ರಕ್ರಿಯೆಯಲ್ಲಿ ವರದಿ ಮಾಡುವುದನ್ನು ತಡೆಹಿಡಿಯಲಾಗಿದೆ.


- ಸಂಧಾನಕಾರರಿಗೆ ಉತ್ತರ ಪ್ರದೇಶ ಸರ್ಕಾರ ಎಲ್ಲಾ ಸೌಲಭ್ಯ ಒದಗಿಸಬೇಕು. 


- ಸಂಧಾನಕಾರರು ಅಗತ್ಯವೆನಿಸಿದಲ್ಲಿ ಹೆಚ್ಚಿನ ಕಾನೂನು ಸಹಕಾರ ಪಡೆಯಬಹುದು.